ರಾಮನಗರ (ವಿಶ್ವ ಕನ್ನಡಿಗ ನ್ಯೂಸ್) : ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.ಜೈಶಂಕರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಿ ಎನ್ ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮರಿಲಿಂಗೇಗೌಡ ಮತ್ತು ಇನ್ನೂ ಹಲವರು ಜೆಡಿಎಸ್ ಗೆ ವಿದಾಯ ಹೇಳಿ ಬಿಜೆಪಿ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ತಾಪಂ ಮಾಜಿ ಅಧ್ಯಕ್ಷ ಈರೇಗೌಡ, ಬಮೂಲ್ ಮಾಜಿ ನಿರ್ದೇಶಕ ಮರಿಯಪ್ಪ ಸೇರಿದಂತೆ ಇತರರು ಬಿಜೆಪಿ ಸೇರಿದರು. ಮರಿಲಿಂಗೇಗೌಡರ ಸೇರ್ಪಡೆಯಿಂದ ರಾಮನಗರ ಜಿಲ್ಲೆಯಲ್ಲಿ ಬಿಜೆಪಿಗೆ ಬಲ ಬಂದಿದೆ ಎಂದು ಸಚಿವ ಅಶ್ವತ್ಥ ನಾರಾಯಣ ಹೇಳಿದರು.
ಮರಿಲಿಂಗೇಗೌಡರು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬೊಮ್ಮಾಯಿಯವರ ಆಡಳಿತ ಕಂಡು ಬಿಜೆಪಿ ಸೇರುತ್ತಿದ್ದೇನೆ. ದೇಶವನ್ನು ಬಲಿಷ್ಠವಾಗಿ ಕಟ್ಟುವುದು ಮತ್ತು ಪ್ರಜಾಪ್ರಭುತ್ವದ ಉಳಿವು ಬಿಜೆಪಿಯಿಂದ ಮಾತ್ರ ಸಾಧ್ಯ, ಹೀಗಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದೇನೆ ಎಂದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.