(www.vknews.in). ಕಾಸರಗೋಡು;ಅಣೆಕಟ್ಟಿನಲ್ಲಿ ಸ್ನಾನಕ್ಕಿಳಿದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಮಣಿಯಂಪಾರೆಯಲ್ಲಿ ನಡೆದಿದೆ.
ಚಲ್ಲಂಗಯ ಸಿ.ಜೆ ಮೂಲೆಯ ಅಬ್ದುಲ್ಲ ರವರ ಪುತ್ರ ಜಸ್ವಾದ್ (17) ನಾಪತ್ತೆಯಾದವನು. ಸ್ನೇಹಿತರ ಜೊತೆ ಸ್ನಾನಕ್ಕಿಲಿದ ಸಂದರ್ಭದಲ್ಲಿ ನೀರುಪಾಲಾಗಿದ್ದು, ಅಗ್ನಿ ಶಾಮಕ ದಳದ ಸಿಬ್ಬಂದಿಗಳು , ಸ್ಥಳೀಯರು ರಾತ್ರಿ ತನಕ ಶೋಧ ನಡೆಸಿದರೂ ಪತ್ತೆ ಹಚ್ಚಲು ಸಾಧ್ಯವಾಗಲಿಲ್ಲ.
ಈ ಕುರಿತು ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಜಸ್ವಾದ್ ಮುಹಿಮ್ಮತ್ ಹಯರ್ ಸೆಕೆಂಡರಿ ಶಾಲೆಯ ಪ್ಲಸ್ ಟು ವಿದ್ಯಾರ್ಥಿಯಾಗಿದ್ದಾನೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.