ಶಿಡ್ಲಘಟ್ಟ, (ವಿಶ್ವಕನ್ನಡಿಗ ನ್ಯೂಸ್): ಧಾರ್ಮಿಕ ಶ್ರದ್ಧಾಕೇಂದ್ರಗಳು ಸುಸ್ಥಿತಿಯಲ್ಲಿದ್ದಲ್ಲಿ ದೇವರ ಮೇಲಿನ ನಂಬಿಕೆಗಳು ಮತ್ತಷ್ಟು ಗಟ್ಟಿಯಾಗುವುದರ ಜೊತೆಗೆ ಪೂಜ್ಯನೀಯವಾಗುತ್ತದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಸಿ.ಎಸ್.ಪ್ರಶಾಂತ್ ತಿಳಿಸಿದರು.
ತಾಲೂಕಿನ ಬೆಳ್ಳೂಟಿ ಶ್ರೀ ಲಕ್ಷ್ಮೀಸಿಂಹ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 250000 ಮೊತ್ತದ ಡಿ.ಡಿ ವಿತರಣೆ ಮಾಡಿ ಮಾತನಾಡಿದರು.
ಧರ್ಮಸ್ಥಳದ ಧರ್ಮಾಧಿಕಾರಿಗಳ ಮಾರ್ಗದರ್ಶನದಲ್ಲಿ ರಾಜ್ಯಾದ್ಯಂತ ಧಾರ್ಮಿಕ ಶ್ರದ್ಧಾಕೇಂದ್ರಗಳ ಸ್ವಚ್ಛತೆ ನಡೆಸುವುದರ ಜೊತೆಗೆ ಜೀರ್ಣೋದ್ಧಾರಗೊಳ್ಳುತ್ತಿರುವ ದೇವಸ್ದಾನಗಳ ಅಭಿವೃದ್ಧಿಗೆ ಕೋಟ್ಯಾಂತರ ಮೊತ್ತವನ್ನು ನೀಡುತ್ತಿದ್ದು ಇದರ ಸದ್ವಿನಿಯೋಗವನ್ನು ಮಾಡಿ ದೇವಸ್ಥಾನಗಳ ಪಾವಿತ್ರ್ಯತೆಯನ್ನು ಕಾಪಾಡಿಕೊಳ್ಳಬೇಕು ಎಂದರು.
ಈ ಸಂದರ್ಭ ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್, ದೇವಸ್ಥಾನ ಸಮಿತಿ ಅಧ್ಯಕ್ಷ ರವೀಂದ್ರ ಬೂದಾಳ, ನವೀನ್ ಕುಮಾರ್, ಬೆಳ್ಳೂಟಿ ವೆಂಕಟೇಶ್, ಚಂದ್ರಶೇಖರ್, ರಾಮಾಂಜನೇಯ, ಜಯಪಾಲ್ ರೆಡ್ಡಿ, ವರದರಾಜ್ ,ಕಿರಣ್ ಕುಮಾರ್, ಮೇಲ್ವಿಚಾರಕರಾದ ನವೀನ್ ಸೇವಾಪ್ರತಿನಿಧಿ ವೆಂಕಟಲಕ್ಷ್ಮಿ ಮತ್ತಿತರರು ಉಪಸ್ಥಿತರಿದ್ದರು.
ವರದಿ: ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.