ಮಂಗಳೂರು (www.vknews.in) : ಸಮುದ್ರದಲ್ಲಿ ಸ್ನಾನಕ್ಕೆ ಇಳಿದಿದ್ದ ಯುವಕನೋರ್ವ ನೀರುಪಾಲಾಗಿರುವ ಘಟನೆ ನಗರದ ಹೊರವಲಯದ ತಣ್ಣೀರು ಬಾವಿ ಕಡಲ ಕಿನಾರೆಯಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಕಾಣೆಯಾದ ಯುವಕನನ್ನು ತಣ್ಣೀರುಬಾವಿ ನಿವಾಸಿ ಮುಹಮ್ಮದ್ ಕೈಫ್(19) ಎಂದು ತಿಳಿದು ಬಂದಿದೆ.
ಮುಹಮ್ಮದ್ ಕೈಫ್ ಶುಕ್ರವಾರ ಮಧ್ಯಾಹ್ನ ಮನೆಯ ಸಮೀಪದ ತಣ್ಣೀರುಬಾವಿ ಕಡಲಿನಲ್ಲಿ ಸ್ನಾನಕ್ಕೆಂದು ಹೋಗಿದ್ದು, ಸಮುದ್ರದ ಬೃಹತ್ ಅಲೆಗಳ ಹೊಡೆತಕ್ಕೆ ಸಿಲುಕಿ ನೀರು ಪಾಲಾಗಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಕುಟುಂಬಸ್ಥರು ಹಾಗೂ ಸ್ಥಳೀಯರು ಈತನ ಹುಡುಕಾಟದಲ್ಲಿ ತೊಡಗಿದ್ದು, ಕೈಫ್ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.