ಮುಲ್ಕಿ (ವಿಶ್ವ ಕನ್ನಡಿಗ ನ್ಯೂಸ್) : ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮುಲ್ಕಿಯಲ್ಲಿ ನಡೆದಿದೆ. ಮುನೀರ್(23)ಮೃತಪಟ್ಟ ಯುವಕನಾಗಿದ್ದಾನೆ. ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದ ಮುನೀರ್ ಕೆಲಸ ಮುಗಿಸಿ ರಾತ್ರಿ ತನ್ನ ಮನೆಗೆ ತೆರಳಲು ಬೈಕ್ ಹೋಗುತಿದ್ದ ವೇಳೆ ವೇಗವಾಗಿ ಬಂದ ಕಾರು ಅವರ ಬೈಕ್ ಗೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಮುನೀರ್ ಅವರನ್ನು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಇದೀಗ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.