ಚಿಕ್ಕಬಳ್ಳಾಪುರ, (ವಿಶ್ವ ಕನ್ನಡಿಗ ನ್ಯೂಸ್):ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ ದೊರೆಯುವ ಪಿಂಚಣಿ ಇನ್ನಿತರೆ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳು ಸದುಪಯೋಗ ಮಾಡಿಕೊಳ್ಳಬೇಕೆಂದು ಕೆಪಿಸಿಸಿ ಸದಸ್ಯ ವಿನಯ್ ಎನ್ ಶ್ಯಾಮ್ ತಿಳಿಸಿದರು.
ಕ್ಷೇತ್ರದಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ ವಯೋವೃದ್ಧರು, ವಿಕಲಚೇತನರು, ವಿಧವೆಯರಿಗೆ ಪಿಂಚಣಿ ಸೌಲಭ್ಯವನ್ನು ತಮ್ಮ ಆಪ್ತರ ಮೂಲಕ ವಿತರಿಸಿ ಮಾತನಾಡಿದ ಅವರು ಕೊರೊನಾ ಸಂದರ್ಭದಲ್ಲಿ ಕ್ಷೇತ್ರದಲ್ಲಿ ಅನೇಕ ಮಂದಿ ಹಿರಿಯ ನಾಗರಿಕರು ಮಾಶಾಸನ ಸೌಲಭ್ಯದಿಂದ ವಂಚಿತಗೊಂಡಿದ್ದರು ಜೊತೆಗೆ ಅರ್ಹ ಫಲಾನುಭವಿಗಳು ಸಾಮಾಜಿಕ ಭದ್ರತಾ ಯೋಜನೆಯಡಿ ದೊರೆಯುವ ಸೌಲಭ್ಯಗಳನ್ಮು ಪಡೆಯಲು ಪದಾಡುತ್ತಿದ್ದಾರೆ ಎಂದು ಅರಿತುಕೊಂಡು ತಮ್ಮ ಜಿ.ಹೆಚ್.ಎನ್ ಫೌಂಡೇಶನ್ ಮೂಲಕ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಸ್ವೀಕರಿಸಿ ಅದನ್ನು ಕಾನೂನಾತ್ಮಕವಾಗಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದು ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ ಎಂದರು.
ಕ್ಷೇತ್ರದಲ್ಲಿ ಆರೋಗ್ಯ ಶಿಕ್ಷಣ ಮತ್ತು ಕೈಗಾರಿಕೆ ರಂಗಗಳಲ್ಲಿ ಜನರಿಗೆ ಹೆಚ್ಚಿನ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವಿಶೇಷ ಆದ್ಯತೆ ನೀಡಲಾಗಿದೆ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರವೇಶ ಶುಲ್ಕವನ್ನು ಪಾವತಿಸಲಾಗಿದೆ ಬ್ಯಾಗ್ಗಳನ್ನು ವಿತರಿಸಲಾಗಿದೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ನಾಗರಿಕರಿಗೆ ಅಗತ್ಯ ನೆರವು ನೀಡಿ ಆಸ್ಪತ್ರೆಗಳ ಮೂಲಕ ಚಿಕಿತ್ಸೆಯನ್ನು ಒದಗಿಸಲಾಗಿದೆ ಎಂದರು.
ಮುಂದಿನ ದಿನಗಳಲ್ಲಿ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಲಾಗುವುದು ಎಂದ ಅವರು ವಿವಿಧ ಖಾಸಗಿ ಕಂಪನಿಗಳೊಂದಿಗೆ ಮಾತುಕತೆ ನಡೆಸಿ ಅತಿ ಶೀಘ್ರದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗುವುದು ಎಂದರು.
ವರದಿ: ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.