(www.vknews.in) : ಮಂಗಳೂರಿನ ಎಸ್. ಎಂ. ಆರ್ ಗ್ರೂಪ್ಸ್ ನ ವ್ಯವಸ್ಥಾಪಕ ನಿರ್ದೇಶಕರಾದ ಎಸ್ ಎಂ ರಶೀದ್ ಹಾಜಿ ಯವರಿಗೆ ಯೂನಿವರ್ಸಿಟಿ ಆಫ್ ಸೆಂಟ್ರಲ್ ಅಮೇರಿಕಾ ವತಿಯಿಂದ ಗೌರವ ಡಾಕ್ಟರೇಟ್ ಪುರಸ್ಕಾರಗೊಂಡ ಹಿನ್ನೆಲೆಯಲ್ಲಿ ವಿವಿಧ ಸಂಘ -ಸಂಸ್ಥೆಗಳ ವತಿಯಿಂದ ಸನ್ಮಾನಿಸಲಾಯಿತು. ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ಉಧ್ಯಮ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಈ ಡಾಕ್ಟರೇಟ್ ಪುರಸ್ಕಾರ ನೀಡಲಾಗಿದೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಮಾಜಿ ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಐವಾನ್ ಡಿ ಸೋಜ ಸನ್ಮಾನಿಸಿದರು. ದ. ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ ಕೆ ಶಾಹುಲ್ ಹಮೀದ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದ. ಕ ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಉಪಾಧ್ಯಕ್ಷ ಕೆ ಎಂ ಮುಸ್ತಫಾ, ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಸ್ ಸಂಶುದ್ಧಿನ್, ಸಾಮಾಜಿಕ ಕಾರ್ಯಕರ್ತ ಹನೀಫ್ ಪಾಜಪಳ್ಳ, ಭಾಗವಹಿಸಿದ್ದರು.
ಮೆಲ್ಕಾರ್ ವುಮೆನ್ಸ್ ಎಜುಕೇಷನ್ ಟ್ರಸ್ಟ್ ನ ಅಧ್ಯಕ್ಷರು, ಖೈರಿಯ ಅನಾಥ ಮಕ್ಕಳ ಶಿಕ್ಷಣ ಕೇಂದ್ರ ಸ್ಥಾಪಕರು, ಬ್ಯಾರಿಸ್ ಚೆಬರ್ ಆಫ್ ಕಾಮರ್ಸ್ &ಇಂಡಸ್ಟ್ರಿಸ್ ಸ್ಥಾಪಕಧ್ಯಕ್ಷರು, ದ. ಕ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಮಾಜಿ ಅಧ್ಯಕ್ಷರು, ಎಸ್ ಎಂ ಆರ್ ಗ್ರೂಪ್ಸ್ ನ ಚಯರ್ ಮೆನ್ ಆಗಿಯೂ ಕಾರ್ಯನಿರ್ವಹಿಸುತ್ತಿರುವ ರಶೀದ್ ಹಾಜಿ ಯವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಗಿರುತ್ತಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.