ಹುಬ್ಬಳ್ಳಿ (ವಿಶ್ವ ಕನ್ನಡಿಗ ನ್ಯೂಸ್) : ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮಾಂಸಾಹಾರ ಸೇವಿಸಿ ದೇವಸ್ಥಾನ ಪ್ರವೇಶ ಮಾಡಿದ್ದಾರೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಸಿದ್ದರಾಮಯ್ಯನವರು ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗಿದ್ದು ತಪ್ಪಲ್ಲ ಎಂದು ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ಚರ್ಚೆ ಮಾಡಲು ಬೇರೆ ವಿಷಯವೇ ಇಲ್ಲ, ಬಿಜೆಪಿಯವರು ಇಂತಹ ವಿಚಾರಗಳನ್ನು ಚರ್ಚೆ ಮಾಡುವುದನ್ನು ಬಿಟ್ಟು ಸಾವರ್ಕರ್ ವಿಚಾರಗಳನ್ನು ಚರ್ಚೆ ಮಾಡಲಿ. ಸಿದ್ದರಾಮಯ್ಯ ಅವರು ಮಾಂಸಾಹಾರ ಸೇವನೆ ಮಾಡಿ ದೇವಸ್ಥಾನಕ್ಕೆ ಹೋಗಿದ್ದು ತಪ್ಪಲ್ಲ, ಹಿಂದೂಗಳಲ್ಲಿ ಸಾಕಷ್ಟು ಜನರು ಮಾಂಸಾಹಾರಿಗಳಿದ್ದಾರೆ. ಹಿಂದೂ ದೇವರುಗಳಿಗೂ ಮಾಂಸಾಹಾರ ಪ್ರಸಾದ ಮಾಡ್ತಾರೆ. ಅದರಲ್ಲಿ ಏನಿದೆ ತಪ್ಪು? ಇದು ಚರ್ಚೆಯ ವಿಷಯವೇ ಅಲ್ಲ ಎಂದು ಅವರು ಬಿಜೆಪಿಯನ್ನು ತರಾಟೆಗೆತ್ತಿಕೊಂಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.