ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ಆಧಾರ್ ಕಾರ್ಡ್ ಲಿಂಕ್ ಮಾಡಿಲ್ಲ ಎಂಬ ಕಾರಣವನ್ನು ಇಟ್ಟುಕೊಂಡು ಮತದಾರರ ಪಟ್ಟಿಯಲ್ಲಿನ ಹೆಸರನ್ನು ಅಳಿಸುವಂತಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.
ಕಳೆದ ಜುಲೈ 4ರಂದು ಎಲ್ಲಾ ರಾಜ್ಯಗಳಿಗೆ ಮುಖ್ಯ ಚುನಾವಣಾ ಅಧಿಕಾರಿಗಳು ನೀಡಿರುವ ನೋಟಿಸ್ ನಲ್ಲಿರುವ ಅಂಶವನ್ನು ಆಯೋಗ ಉಲ್ಲೇಖಿಸಿದೆ. ಅದರ ಪ್ರಕಾರ, ಮತದಾರರ ಗುರುತಿನ ಚೀಟಿ ಜೊತೆಗೆ ಆಧಾರ್ ಜೋಡಣೆ ಮಾಡುವುದು ಸ್ವಯಂಪ್ರೇರಿತ ಪ್ರಕ್ರಿಯೆ ಆಗಿರುತ್ತದೆ. ಆಧಾರ್ ಮತ್ತು ವೋಟರ್ ಐಡಿ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಿಲ್ಲ ಎಂದು ಆಯೋಗವು ಸ್ಪಷ್ಟವಾಗಿ ಹೇಳಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.