ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ತೀವ್ರ ವಿವಾದಕ್ಕೆ ಕಾರಣವಾಗಿದ್ದ ಚಾಮರಾಜಪೇಟೆ ಈದ್ಗಾ ಮೈದಾನ ಮಾಲೀಕತ್ವ ವಿವಾದಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ತೀರ್ಪು ನೀಡಿದೆ. ಬಿಬಿಎಂಪಿ ಆದೇಶ ಪ್ರಶ್ನಿಸಿ ವಕ್ಫ್ ಮಂಡಳಿ ಸಲ್ಲಿಸಿರುವ ಅರ್ಜಿ ಕುರಿತು ಕೆಲ ಕಾಲ ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರು ವಿವಾದಿತ ಈದ್ಗಾ ಮೈದಾನವನ್ನು ಆಟದ ಮೈದಾನವಾಗಿ ಮಾತ್ರ ಬಳಸಬೇಕೆಂದು ತೀರ್ಪು ನೀಡಿ, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 23ಕ್ಕೆ ಮುಂದೂಡಿದ್ದಾರೆ.
ರಂಜಾನ್, ಬಕ್ರೀದ್ ವೇಳೆ ಪ್ರಾರ್ಥನೆಗೆ ಬಳಸಲು ಅವಕಾಶ ನೀಡಿರುವ ನ್ಯಾಯಾಲಯ, ಬೇರೆ ಯಾವುದೇ ರೀತಿಯ ಆಚರಣೆಗೆ ಬಳಸದಂತೆ ಸ್ಪಷ್ಟಪಡಿಸಿದೆ. ಇದರಿಂದಾಗಿ ಈ ಬಾರಿ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಅವಕಾಶ ನೀಡುವಂತೆ ಬೇಡಿಕೆ ಇಟ್ಟಿದ್ದ ಸಂಘಟನೆಗಳಿಗೆ ಹಿನ್ನೆಡೆ ಆಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.