ಉಡುಪಿ ,(ವಿಶ್ವ ಕನ್ನಡಿಗ ನ್ಯೂಸ್ ) : ಉಡುಪಿ ಜಿಲ್ಲೆಯ ರಜತ ಮಹೋತ್ಸವದ ಪ್ರಯುಕ್ತ ಬೋರ್ಡ್ ಹೈಸ್ಕೂಲ್ನಿಂದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದವರೆಗೆ ನಡೆದ ಮೆರವಣಿಗೆಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ.ಆರ್.ಮೆಂಡನ್, ವಿವಿಧ ಸಂಘ-ಸ೦ಸ್ಥೆಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.