ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ವಿವಾದಿತ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಗಣೇಶೋತ್ಸವಕ್ಕೆ ಅನುಮತಿ ನೀಡಿದೆ. ಈ ಮೊದಲು ಬಕ್ರೀದ್ ಮತ್ತು ರಂಜಾನ್ ಪ್ರಾರ್ಥನೆಗೆ ಅವಕಾಶ ನೀಡಲಾಗಿತ್ತು. ಗಣೇಶೋತ್ಸವಕ್ಕೆ ಅವಕಾಶ ನೀಡಿರಲಿಲ್ಲ. ಆದರೆ, ಇದೀಗ ನಿನ್ನೆ ನೀಡಿದ್ದ ಆದೇಶ ಮಾರ್ಪಡಿಸಿ ಹೈಕೋರ್ಟ್ ಗಣೇಶೋತ್ಸವ ಆಚರಿಸಲು ಅವಕಾಶ ನೀಡಿದೆ.
ಈದ್ಗಾ ಮೈದಾನ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಆದೇಶದ ವಿರುದ್ಧ ವಕ್ಫ್ ಬೋರ್ಡ್ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಸಂಬಂಧ ನಿನ್ನೆ ವಿಚಾರಣೆ ನಡೆಸಿದ ಹೈಕೋರ್ಟ್ ಯಥಾಸ್ಥಿತಿ ಕಾಪಾಡುವಂತೆ ಆದೇಶ ಹೊರಡಿಸಿತ್ತು. ಇಂದು ಗಣೇಶೋತ್ಸವಕ್ಕೆ ಸಂಬಂಧಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಪರಿಶೀಲಿಸಿ ಧಾರ್ಮಿಕ, ಸಾಂಸ್ಕೃತಿಕ ಆಚರಣೆಗೆ ಅನುಮತಿ ನೀಡಬಹುದು ಎಂದು ಹೇಳಿದೆ. ಆಗಸ್ಟ್ 31 ರಿಂದ ನಿರ್ದಿಷ್ಟ ಅವಧಿಗೆ ಮಾತ್ರ ಹೈಕೋರ್ಟ್ ಅನುಮತಿ ನೀಡಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.