ಹೊಸದಿಲ್ಲಿ (www.vknews.in) : ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಲಲಿತ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಲಲಿತ್ ಅವರು ನವೆಂಬರ್ 8 ರಂದು ನಿವೃತ್ತರಾಗಲಿರುವುದರಿಂದ ಅವರು 74 ದಿನಗಳ ಅಧಿಕಾರವನ್ನು ಹೊಂದಿರುತ್ತಾರೆ.
ಸಿಜೆಐ ಆಗಿ ತಮ್ಮ 74 ದಿನಗಳ ಅಧಿಕಾರಾವಧಿಯಲ್ಲಿ, ಹೊಸ ಪ್ರಕರಣಗಳ ಪಟ್ಟಿ ಪ್ರಕ್ರಿಯೆಯನ್ನು ಸಾಧ್ಯವಾದಷ್ಟು ಸರಳ, ಪರಿಣಾಮಕಾರಿ, ತ್ವರಿತ ಮತ್ತು ಪಾರದರ್ಶಕವಾಗಿಸಲು ಶ್ರಮಿಸುವುದಾಗಿ ಅವರು ಹೇಳಿದರು. ಎನ್.ವಿ. ರಮಣ ಅವರು ಶುಕ್ರವಾರ ಸಿಜೆಐ ಹುದ್ದೆಯಿಂದ ನಿವೃತ್ತರಾಗಿದ್ದರು. ತನ್ನ ಉತ್ತರಾಧಿಕಾರಿಯನ್ನಾಗಿ ಲಲಿತ್ ಅವರ ಹೆಸರನ್ನುಸರಕಾರಕ್ಕೆ ಶಿಫಾರಸು ಮಾಡಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.