ಶಾರ್ಜಾ (ವಿಶ್ವ ಕನ್ನಡಿಗ ನ್ಯೂಸ್) : ಏಷ್ಯಾಕಪ್ ನಲ್ಲಿ ಅಫ್ಘಾನಿಸ್ತಾನ ಸತತ ಎರಡನೇ ಗೆಲುವು ದಾಖಲಿಸಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ಅಫ್ಘಾನಿಸ್ತಾನ ಮೇಲುಗೈ ಸಾಧಿಸಿ ಬಾಂಗ್ಲಾದೇಶವನ್ನು ಸೋಲಿಸಿತು. ಈ ಪಂದ್ಯವನ್ನು ಅಫ್ಘಾನಿಸ್ತಾನ 7 ವಿಕೆಟ್ ಗಳಿಂದ ಗೆದ್ದುಕೊಂಡಿತು. ಇದರೊಂದಿಗೆ ಅಫ್ಘಾನಿಸ್ತಾನ ಸೂಪರ್ ಫೋರ್ ಪ್ರವೇಶಿಸಿತು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಬಾಂಗ್ಲಾದೇಶವನ್ನು ಆಫ್ಘಾನಿಸ್ತಾನದ ಬೌಲರ್ ಗಳು ಏಳು ವಿಕೆಟ್ ನಷ್ಟಕ್ಕೆ 127 ರನ್ ಗಳಿಗೆ ನಿಯಂತ್ರಿಸಿದರು. ಇದಕ್ಕೆ ಉತ್ತರವಾಗಿ ಅಫ್ಘಾನಿಸ್ತಾನ 18.3 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 131 ರನ್ ಗಳಿಸಿತು. ಅಫ್ಘಾನಿಸ್ತಾನದ ಪರ ಇಬ್ರಾಹಿಂ ಜದ್ರಾನ್ (42*) ಮತ್ತು ನಜೀಬುಲ್ಲಾ ಜದ್ರಾನ್ (43*) ನಾಲ್ಕನೇ ವಿಕೆಟ್ ಜೊತೆಯಾಟದಲ್ಲಿ ಭಾಗಿಯಾದರು. ಹಜರತುಲ್ಲಾ ಜಜೈ 23 ರನ್ ಗಳಿಸಿದರು. ಬಾಂಗ್ಲಾದೇಶದ ಪರ ಶಕೀಬ್ ಅಲ್ ಹಸನ್, ಮುಸಾದಿಕ್ ಹೊಸೇನ್ ಮತ್ತು ಮೊಹಮ್ಮದ್ ಸೈಫುದ್ದೀನ್ ತಲ್ಲ ಒಂದು ವಿಕೆಟ್ ಪಡೆದರು.
ಬಾಂಗ್ಲಾದೇಶದ ಪರ ಮುಸಾದಿಕ್ ಹೊಸೇನ್ ಅಜೇಯ 48 ರನ್, ಮಹಮೂದುಲ್ಲಾ 25 ರನ್ ಗಳಿಸಿದರು. ಅಫ್ಘಾನಿಸ್ತಾನ ಪರ ರಶೀದ್ ಖಾನ್ ಮತ್ತು ಮುಜೀಬ್ ರಹಮಾನ್ ತಲಾ ಮೂರು ವಿಕೆಟ್ ಪಡೆದರು. ಅಫ್ಘಾನಿಸ್ತಾನ ನಾಲ್ಕು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಮೂರು ವಿಕೆಟ್ ಪಡೆದು ಬಾಂಗ್ಲಾದೇಶವನ್ನು ಸಣ್ಣ ಮೊತ್ತಕ್ಕೆ ನಿಯಂತ್ರಿಸಿದ ಮುಜೀಬ್ ರಹ್ಮಾನ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದುಕೊಂಡರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.