ಹುಬ್ಬಳ್ಳಿ (ವಿಶ್ವ ಕನ್ನಡಿಗ ನ್ಯೂಸ್) : ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಿಸಲು ಅನುಮತಿ ನೀಡಿದ ಪಾಲಿಕೆಯ ಆದೇಶ ಪ್ರಶ್ನಿಸಿ ಅಂಜುಂ ಇ ಇಸ್ಲಾಮ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್ ಹುಬ್ಬಳ್ಳಿ-ಧಾರವಾಡ ಪೀಠ, ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಅಧಿಕಾರವನ್ನು ಹುಬ್ಬಳ್ಳಿ-ಧಾರವಾರ ಮಹಾನಗರ ಪಾಲಿಕೆ ಆಯುಕ್ತರಿಗೆ ನೀಡಿ ಆದೇಶ ಹೊರಡಿಸಿದೆ.
ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಸ್ಥಾಪನೆಗೆ ಆಕ್ಷೇಪಿಸಿ ಹುಬ್ಬಳ್ಳಿಯ ಅಂಜುಮನ್ ಇಸ್ಲಾಂ ಸಂಸ್ಥೆಯು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರ ನೇತೃತ್ವದ ವಿಶೇಷ ಏಕಸದಸ್ಯ ಪೀಠವು ನಡೆಸಿ, ಆಗಸ್ಟ್ 31ರಿಂದ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಗಳನ್ನು ಸೀಮಿತ ಉದ್ದೇಶಕ್ಕೆ ಪ್ರತಿಷ್ಠಾಪಿಸುವುದಕ್ಕೆ ಸಂಬಂಧಿಸಿದಂತೆ ಮತ್ತು ಸೀಮಿತ ಅವಧಿಗೆ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲು ಹಿಂದೂ ಸಂಘಟನೆಗಳು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಮನವಿ ನೀಡಿವೆ ಎಂದು ಪೀಠವು ಆದೇಶದಲ್ಲಿ ಹೇಳಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.