ಲಖನೌ (ವಿಶ್ವ ಕನ್ನಡಿಗ ನ್ಯೂಸ್) : ಉತ್ತರ ಪ್ರದೇಶದಲ್ಲಿ ಪತ್ನಿಯ ನಗ್ನ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ಯುವಕನೊಬ್ಬನನ್ನು ಬಂಧಿಸಲಾಗಿದೆ. ಫಾಲೋವರ್ಸ್ ಸಂಖ್ಯೆ ಹೆಚ್ಚಿಸಿಕೊಳ್ಳಲು ಪತ್ನಿಯ ಬಾತ್ ರೂಂ ದೃಶ್ಯವನ್ನು ಫೇಸ್ ಬುಕ್ ನಲ್ಲಿ ಶೇರ್ ಮಾಡಿದ್ದ, ಸಂದೀಪ್ ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಈ ಘಟನೆ ನಡೆದಿದೆ.
ಪತ್ನಿ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಯುವಕ ತನ್ನ ಪತ್ನಿ ಸ್ನಾನ ಮಾಡುತ್ತಿರುವ ದೃಶ್ಯವನ್ನು ವಿಡಿಯೋ ಕಾಲ್ ನಲ್ಲಿ ಸೆರೆ ಹಿಡಿದಿದ್ದಾನೆ. ನಂತರ ಈ ವಿಡಿಯೋವನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂದೀಪ್ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದರು. ಆದರೆ ಅನುಯಾಯಿಗಳ ಕೊರತೆ ನಿರಾಸೆ ಮೂಡಿಸಿದೆ.
ಫಾಲೋವರ್ಸ್ ಸಂಖ್ಯೆ ಹೆಚ್ಚಿಸಿಕೊಳ್ಳಬೇಕು ಎಂದುಕೊಂಡು ಪತ್ನಿಯ ಬಾತ್ ರೂಂ ದೃಶ್ಯವನ್ನು ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ. ಸಂದೀಪ್ ಮತ್ತು ಮಹಿಳೆ ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದರು. ಸಂದೀಪ್ ಆಗ ದೆಹಲಿಯಲ್ಲಿ ಕೆಲಸ ಮಾಡುತ್ತಿದ್ದರು. ಸಂದೀಪ್ ಒಮ್ಮೆ ತನ್ನ ಪತ್ನಿ ಸ್ನಾನ ಮಾಡುವಾಗ ದೆಹಲಿಯಿಂದ ವಿಡಿಯೋ ಕಾಲ್ ಮಾಡಿದ್ದ. ವಿಡಿಯೋ ಕಾಲ್ ಆನ್ ಆಗಿದ್ದರಿಂದ ಸಂದೀಪ್ ಪತ್ನಿ ಸ್ನಾನ ಮಾಡುತ್ತಿರುವ ದೃಶ್ಯಗಳನ್ನು ರೆಕಾರ್ಡ್ ಮಾಡಿ ಮೊಬೈಲ್ ನಲ್ಲಿ ಸೇವ್ ಮಾಡಿಕೊಂಡಿದ್ದು, ಮಹಿಳೆಗೆ ಇದು ಗೊತ್ತಿರಲಿಲ್ಲ.
ಸೋಷಿಯಲ್ ಮೀಡಿಯಾಕ್ಕೆ ಅಡಿಕ್ಟ್ ಆಗಿರುವ ಯುವಕ ಫೇಸ್ ಬುಕ್ ನಲ್ಲಿ ಹೆಚ್ಚು ಫಾಲೋವರ್ಸ್ ಪಡೆಯಲು ಹಲವು ರೀತಿಯಲ್ಲಿ ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಕೊನೆಗೆ ಆತ ತನ್ನ ಪತ್ನಿಯ ಸ್ನಾನಗೃಹದ ದೃಶ್ಯಗಳನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಡಿಯೋವನ್ನು ಗಮನಿಸಿದ ಮಹಿಳೆ ತನ್ನ ಪತಿಗೆ ಕರೆ ಮಾಡಿ ವಿಡಿಯೋ ಡಿಲೀಟ್ ಮಾಡುವಂತೆ ಕೇಳಿದ್ದಾಳೆ. ಆದರೆ ಸಂದೀಪ್ ವಿಡಿಯೋ ತೆಗೆಯಲಿಲ್ಲ. ಪದೇ ಪದೇ ಕೇಳಿಕೊಂಡರೂ ಸಂದೀಪ್ ಪತ್ನಿಯ ಮನವಿಗೆ ಕಿವಿಗೊಡಲಿಲ್ಲ. ಈ ವಿಡಿಯೋ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ನಂತರ ಮಹಿಳೆ ಪೊಲೀಸ್ ಠಾಣೆಗೆ ತೆರಳಿ ಪತಿ ವಿರುದ್ಧ ದೂರು ದಾಖಲಿಸಿದ್ದಾರೆ. ಪತ್ನಿ ದೂರು ನೀಡಿದ್ದಾರೆ ಎಂದು ತಿಳಿದ ಸಂದೀಪ್ ವಿಡಿಯೋ ಡಿಲೀಟ್ ಮಾಡಿದ್ದು, ಕೇಸ್ ಆಗುವುದು ಖಚಿತವಾದಾಗ ಫೇಸ್ ಬುಕ್ ಖಾತೆಯನ್ನೂ ಡಿಲೀಟ್ ಮಾಡಿದ್ದಾರೆ. ಆದರೆ ಸಾಕಷ್ಟು ಮಂದಿ ವಿಡಿಯೋ ನೋಡಿ ಡೌನ್ಲೋಡ್ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಘಟನೆಯ ಬಗ್ಗೆ ವಿವರವಾಗಿ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ರಣವಿಜಯ್ ಸಿಂಗ್ ಹೇಳಿದ್ದಾರೆ. ಪತ್ನಿ ಮತ್ತು ಪತಿಯ ವಿವರವಾದ ಹೇಳಿಕೆಯನ್ನು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.