ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಲೇತ್ರದ ಶಾಸಕ, ಅರಣ್ಯ ಹಾಗೂ ಆಹಾರ, ನಾಗರಿಕ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ಕತ್ತಿ ಅವರಿಗೆ ಮ೦ಗಳವಾರ ರಾತ್ರಿ10 ಗ೦ಟೆ ಸುಮಾರಿಗೆ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಇದ್ದಾಗ ಹೃದಯಾಘಾತವಾಗಿದ್ದರಿಂದ ತಕ್ಷಣ ಅವರನ್ನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ.
ಬೆ೦ಗಳೂರಿನ ಎ೦.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದ ವೇಳೆ ಉಮೇಶ್ ಕತ್ತಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಉಮೇಶ್ ಕತ್ತಿ ಅವರ ಅಗಲಿಕೆಯ ಸುದ್ದಿ ಕೇಳಿ ಅವರ ಕುಟುಂಬಸ್ಥರು ಬೆಳಗಾವಿ ಜಿಲ್ಲೆಯ ಹುಕ್ಕೇರಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.