ಕೋಯಿಕ್ಕೋಡ್ (ವಿಶ್ವ ಕನ್ನಡಿಗ ನ್ಯೂಸ್) : ಶಾಲಾ ಬಾಲಕಿಯೊಬ್ಬಳು ತನ್ನ ಮನೆಯೊಳಗೆ ಶವವಾಗಿ ಪತ್ತೆಯಾಗಿರುವ ಘಟನೆ ಕೋಯಿಕ್ಕೋಡ್ನ ಅಥೋಲಿಯಲ್ಲಿ ನಡೆದಿದೆ. ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ ಟು ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿನಿ ಖದೀಜಾ ರೆಹಶಾ (17) ತನ್ನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಈಕೆ ಅಥೋಲಿ ಪರಂಬತ್ ನ ಬಶೀರ್ ಎಂಬವರ ಮಗಳು.
ಈ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮೃತದೇಹವನ್ನು ಕೋಯಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸಾವಿನ ಬಗ್ಗೆ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.