ಕುಂಬ್ರ(ವಿಶ್ವಕನ್ನಡಿಗ ನ್ಯೂಸ್): ದ.ಕ ಜಿಲ್ಲಾ ಪ್ರಾಂಶುಪಾಲರ ಸಂಘ ದ ವತಿಯಿಂದ ನಡೆದ ವಿಶೇಷ ಸಮಾರಂಭದಲ್ಲಿ ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಸಂದ್ಯಾ ಪಿ ಇವರನ್ನು “ಉತ್ತಮ ಶಿಕ್ಷಕ” ಪ್ರಶಸ್ತಿ ನೀಡಿ ಗೌರವಿಸಲಾಯ್ತು.
ಕರ್ನಾಟಕದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕೊರೋನ ಕಾಲದಲ್ಲಿ ಯಾವುದೇ ಫಲಾಪೇಕ್ಷೆ ಇಲ್ಲದೆ ಗುಣಮಟ್ಟದ ಯೂಟ್ಯೂಬ್ ತರಗತಿ ನೀಡಿದ್ದು, ಕಾಲೇಜಿನಲ್ಲಿ ದ್ವಿತೀಯ ಪದವಿಪೂರ್ವ ವಿಭಾಗಕ್ಕೆ ಉತ್ತಮ ನಿರ್ವಹಣೆ ಹಾಗೂ ಗ್ರಾಮೀಣ ಪ್ರದೇಶದ ಕಾಲೇಜಿನಲ್ಲಿ ಸುದೀರ್ಘ ಕಾಲದ ಸೇವೆ ಮುಂತಾದ ಅಂಶಗಳ ಆಧಾರದಲ್ಲಿ ಆಯ್ಕೆಗೊಂಡ ಜಿಲ್ಲೆಯ ಐವರು ಶಿಕ್ಷಕರಲ್ಲಿ ಇವರು ಓರ್ವರಾಗಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.