ಲಖನೌ (ವಿಶ್ವ ಕನ್ನಡಿಗ ನ್ಯೂಸ್) : ಉತ್ತರಪ್ರದೇಶದ ಲಖಿಂಪುರ್ ಖೇರಿಯಲ್ಲಿ ಇಬ್ಬರು ಅಪ್ರಾಪ್ತ ದಲಿತ ಸಹೋದರಿಯರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೂವರು ವ್ಯಕ್ತಿಗಳು ಮಕ್ಕಳನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಕುಟುಂಬ ಮತ್ತು ಸ್ಥಳೀಯರು ದೂರಿದ್ದಾರೆ. ಮಕ್ಕಳು ತಮ್ಮ ಮನೆಯ ಹತ್ತಿರದ ಕಬ್ಬಿನ ತೋಟದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಕ್ಕಳನ್ನು ಅಪಹರಿಸಿದ್ದಾರೆ ಎಂದು ಶಂಕಿಸಲಾದ ನಾಲ್ವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಎಸ್ಪಿ ಅರುಣ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಅಕ್ಕತಂಗಿಯರನ್ನು ನೆರೆಯ ಹಳ್ಳಿಯ ಮೂವರು ವ್ಯಕ್ತಿಗಳು ಅಪಹರಿಸಿ, ಅತ್ಯಾಚಾರವೆಸಗಿ, ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯ ಬಗ್ಗೆ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರವೇ ಸಾವಿನ ಕಾರಣ ತಿಳಿಯಲಿದೆ. ಅದೇ ಸಮಯದಲ್ಲಿ, ವಿವಿಧ ರಾಜಕೀಯ ಪಕ್ಷಗಳು ಅಪ್ರಾಪ್ತ ದಲಿತ ಬಾಲಕಿಯರ ಸಾವನ್ನು ಕೈಗೆತ್ತಿಕೊಂಡಿವೆ.
ಅಪರಾಧಿಗಳನ್ನು ಗುರುತಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಸ್ಥಳೀಯರು ರಾಷ್ಟ್ರೀಯ ಹೆದ್ದಾರಿಯನ್ನು ತಡೆದರು. ಉದ್ವಿಗ್ನ ಪರಿಸ್ಥಿತಿ ತಲೆದೋರಿರುವುದರಿಂದ ಈ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.