(www.vknews.in) : ಪೊಲೀಸ್ ಇಲಾಖೆ ಸೇರಲು ಬಯಸಿದವರಿಗೆ ಸಂತಸದ ಸುದ್ದಿ. ಪೊಲೀಸ್ ಇಲಾಖೆ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪೊಲೀಸ್ ಇಲಾಖೆಯಲ್ಲಿ ಸಿಎಆರ್, ಡಿಎಆರ್ನಲ್ಲಿ ಖಾಲಿಯಿರುವ 3,064 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಖಾಲಿರುವ ಹುದ್ದೆಗಳಿಗೆ ಆನ್ಲೈನ್ನಲ್ಲಿ https://ksp-recruitment.in ಅರ್ಜಿ ಸಲ್ಲಿಸಬಹುದಾಗಿದೆ.
ಒಟ್ಟು 3,064 ಹುದ್ದೆಗಳಿಗೆ ಅರ್ಜಿ ಆಹ್ವಾನ ಪುರುಷ-2,996 ಪುರುಷ ತೃತೀಯ ಲಿಂಗಿಗಳಿಗೆ- 68 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಶೀಘ್ರ ಪೊಲೀಸ್ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಅಧಿಸೂಚನೆ ಅಪ್ಲೋಡ್ ಮಾಡಲಾಗುತ್ತದೆ. ಈ ಹುದ್ದೆಗಳಿಗೆ SSLC ಪಾಸಾದವರು ಅರ್ಜಿ ಹಾಕಬಹುದು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.