ಚಿಕ್ಕಬಳ್ಳಾಪುರ,(ವಿಶ್ವ ಕನ್ನಡಿಗ ನ್ಯೂಸ್) 2022-23ನೇ ಸಾಲಿನಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಅನುಷ್ಟಾನಗೊಳಿಸುತ್ತಿರುವ ರಾಜ್ಯವಲಯ ನೇಕಾರರ ವಿಶೇಷ ಪ್ಯಾಕೇಜ್ ಯೋಜನೆಯಡಿ 02 ವಿದ್ಯುತ್ಮಗ್ಗ ಖರೀದಿ ಹಾಗೂ ಹೊಸ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಕಾರ್ಯಕ್ರಮದಡಿ ಸಾಮಾನ್ಯ ವರ್ಗದ ನೇಕಾರರಿಗೆ ಶೇಕಡ 50 ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ನೇಕಾರರಿಗೆ ಶೇಕಡ 90 ರ ಸಹಾಯಧನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯುತ್ಮಗ್ಗ ನೇಕಾರರು ಖುದ್ದಾಗಿ ಉಪನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಕೊಠಡಿ ಸಂಖ್ಯೆ: ಎಸ್.ಎ-14, 2ನೇ ಮಹಡಿ, ಜಿಲ್ಲಾಡಳಿತ ಭವನ, ಚಿಕ್ಕಬಳ್ಳಾಪುರ ಈ ಕಚೇರಿಗೆ ಭೇಟಿ ನೀಡಿ ಅರ್ಜಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ: 30-09-2022 ರೊಳಗಾಗಿ ಸಲ್ಲಿಸತಕ್ಕದ್ದು.
ಹೆಚ್ಚಿನ ಮಾಹಿತಿಗಾಗಿ ಈ ಕಚೇರಿಗೆ ಖುದ್ದಾಗಿ ಭೇಟಿ ನೀಡಿ ಪಡೆಯಬಹುದು ಅಥವಾ ಕಚೇರಿ ದೂರವಾಣಿ ಸಂಖ್ಯೆ: 08156-277031/ 277061/ 9448808356/ 9945594959 ಸಂಪರ್ಕಿಸಬಹುದೆಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ:ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.