ಚಿಕ್ಕಬಳ್ಳಾಪುರ,( ವಿಶ್ವ ಕನ್ನಡಿಗ ನ್ಯೂಸ್): ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು (ಡಿ.ಎಸ್.ಟಿ.) “ವಿಜ್ಞಾನ ಮತ್ತು ಇಂಜಿನಿಯರಿಂಗ್ನಲ್ಲಿ ಪಿಹೆಚ್.ಡಿ. ಸಂಶೋಧನೆಗೆ ಕರ್ನಾಟಕ ಡಿ.ಎಸ್.ಟಿ-ಪಿ.ಹೆಚ್.ಡಿ. ಶಿಷ್ಯವೇತನ” ಎಂಬ ಕಾರ್ಯಕ್ರಮವನ್ನು ಇಲಾಖೆಯ ಸ್ವಾಯತ್ತ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ಮುಖಾಂತರ ಅನುಷ್ಠಾನಗೊಳಿಸುತ್ತಿದೆ.
2022-23ನೇ ಸಾಲಿನಲ್ಲಿ ಸದರಿ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆ, ಕಾಲೇಜುಗಳಲ್ಲಿ ಈಗಾಗಲೇ ಪಿಹೆಚ್.ಡಿ. ಪದವಿಗೆ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆನ್ಲೈನ್ ಮೂಲಕ ಅರ್ಜಿಗಳನ್ನು ಅಕ್ಟೋಬರ್ 12 ರಂದು ಸಂಜೆ 5.00 ಗಂಟೆ ರೊಳಗಾಗಿ ಸಲ್ಲಿಸಬಹುದಾಗಿದೆ, ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ಸಲ್ಲಿಸುವ http://ksteps.karnataka.gov.in ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.