ಪುಣೆ (ವಿಶ್ವ ಕನ್ನಡಿಗ ನ್ಯೂಸ್) : ಮಗಳ ಪ್ರಿಯಕರನ ಮುಖಕ್ಕೆ ಮೆಣಸಿನ ಪುಡಿ ಎರಚಿ ಥಳಿಸಿದ ತಾಯಿ ಮತ್ತು ಮಗನನ್ನ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಪುಣೆಯಲ್ಲಿ ನಡೆದಿದೆ. ಪೊಲೀಸರ ಪ್ರಕಾರ, ವಿಶಾಲ್ ಕಸ್ಬೆ ಎಂಬ ಯುವಕ ಕಳೆದ ಆರು ವರ್ಷಗಳಿಂದ ಹುಡುಗಿಯನ್ನು ಪ್ರೀತಿಸುತ್ತಿದ್ದನು. ರಾತ್ರಿ ಬಾಲಕಿಯನ್ನು ನೋಡಲು ಬಂದಾಗ ಬಾಲಕಿಯ ಸಹೋದರ ಹಾಗೂ ತಾಯಿ ಆತನಿಗೆ ಥಳಿಸಿದ್ದಾರೆ.
ತಾಯಿಯೇ ಯುವಕನ ಮುಖಕ್ಕೆ ಮೆಣಸಿನ ಪುಡಿ ಎರಚಿದ್ದಾರೆ. ಈ ವೇಳೆ ಸಹೋದರ ದೊಣ್ಣೆಯಿಂದ ಅಮಾನುಷವಾಗಿ ಥಳಿಸಿದ್ದಾರೆ. ಬಳಿಕ ಸ್ಥಳೀಯರು ಯುವಕನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ತಲೆ ಹಾಗೂ ದೇಹದ ಇತರ ಭಾಗಗಳಿಗೆ ಪೆಟ್ಟು ಬಿದ್ದಿದೆ. ಅವರು ಅಪಾಯದಿಂದ ಪಾರಾಗಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.