ಕೋಲಾರ ( ವಿಶ್ವ ಕನ್ನಡಿಗ ನ್ಯೂಸ್ ) : ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತದ 2021-22ನೇ ಸಾಲಿನ ಸರ್ವ ಸದಸ್ಯರುಗಳ ವಾರ್ಷಿಕ ಮಹಾಸಭೆಯನ್ನು ಸೆ 20 ರಂದು ಮಂಗಳವಾರ ಬೆಳಗ್ಗೆ 10-30 ಗಂಟೆಗೆ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆವರಣದಲ್ಲಿ ಸಂಘದ ಅಧ್ಯಕ್ಷ ಕೆ.ಎಸ್.ಗಣೇಶ್ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದೆ.
ಮಹಾಸಭೆಗೆ ವಿಶೇಷ ಆಹ್ವಾನಿತರಾಗಿ ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷರಾದ ಬ್ಯಾಲಹಳ್ಳಿ ಎಂ.ಗೋವಿಂದಗೌಡ , ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ , ಸಹಕಾರ ಸಂಘದ ಉಪಾಧ್ಯಕ್ಷ ಕೋ.ನಾ.ಮಂಜನಾಥ್ ಆಗಮಿ ಸಲಿದ್ದಾರೆ.
ಈ ವಾರ್ಷಿಕ ಮಹಾಸಭೆಗೆ ಆಡಳಿತ ಮಂಡಳಿಯ ನಿರ್ದೇಶಕರುಗಳು,ಸಂಘದ ಎಲ್ಲಾ ಷೇರುದಾರರು ಆಗಮಿಸಿ ಯಶಸ್ವಿಗೊಳಿಸಲು ಸಂಘದ ಕಾರ್ಯದರ್ಶಿ ಬಿ.ಎಸ್.ಗಂಗಾಧರ್ ಕೋರಿದ್ದಾರೆ. ಸಂಘದ ಎಲ್ಲಾ ಷೇರುದಾರರಿಗೆ ಈಗಾಗಲೇ ಅಂಚೆ ಮೂಲಕ ಆಹ್ವಾನ ಪತ್ರಿಕೆಗಳನ್ನು ಕಳುಹಿಸಲಾಗಿದ್ದು , ಯಾರಿಗಾದರೂ ತಲುಪದೇ ಇದ್ದಲ್ಲಿ ಇದನ್ನೇ ವೈಯಕ್ತಿಕ ಆಹ್ವಾನವೆಂದು ಭಾವಿಸಿ ಸಭೆಗೆ ಆಗಮಿಸಲು ಕೋರಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.