ಕೇರಳ (ವಿಶ್ವ ಕನ್ನಡಿಗ ನ್ಯೂಸ್) : ಪಾಲಕ್ಕಾಡ್ ತ್ರಿಥಾಲಾದಲ್ಲಿ ಅಡುಗೆ ಮಾಡುವಾಗ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮೂವರು ಗಾಯಗೊಂಡಿದ್ದಾರೆ. ಬುಧವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಈ ಘಟನೆಯಲ್ಲಿ ಮನೆಯ ಮಾಲೀಕ ಅಬ್ದುಲ್ ರಜಾಕ್, ಅವರ ಪತ್ನಿ ಸೆರಿನಾ ಮತ್ತು ಮಗ ಸೆಬಿನ್ ಗಾಯಗೊಂಡಿದ್ದಾರೆ.
ಅವರನ್ನು ತ್ರಿಶೂರ್ ವೈದ್ಯಕೀಯ ಕಾಲೇಜಿನ ತುರ್ತು ನಿಗಾ ಘಟಕಕ್ಕೆ ದಾಖಲಿಸಲಾಗಿದೆ. ತ್ರಿಥಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.