(ವಿಶ್ವ ಕನ್ನಡಿಗ ನ್ಯೂಸ್) : ಇಂದು ಸುಮಾರು 12 ರಾಜ್ಯಗಳಲ್ಲಿ PFI ನ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ. ಈ ಸಂಬಂಧ ಇದುವರೆಗೆ 106 ಮಂದಿಯನ್ನು ಬಂಧಿಸಲಾಗಿದೆ. ಇದರಲ್ಲಿ ಕೇರಳದ ಪಿಎಫ್ಐ ಅಧ್ಯಕ್ಷ ಓಯ್ಎಂ ಸಲಾಂ, ಸಿಎಫ್ಐ ಅಧ್ಯಕ್ಷ ಮೊಹಮ್ಮದ್ ಬಶೀರ್ ಅವರನ್ನ ಬಂಧಿಸಲಾಗಿದೆ. ಇಲ್ಲಿಯವರೆಗೆ ದೇಶದ ವಿವಿಧ ನಗರಗಳಲ್ಲಿ ದಾಳಿ ನಡೆಸಲಾಗಿದೆ.
PFI ಯುಪಿಯ ರಾಷ್ಟ್ರೀಯ ಕಾರ್ಯದರ್ಶಿ ನಜರ್ ಉದ್ದೀನ್ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಪಿಎಫ್ಐ ರಾಷ್ಟ್ರೀಯ ಕೌನ್ಸಿಲ್ ಸದಸ್ಯ ಪ್ರೊಫೆಸರ್ ಪಿ.ಕೊಯಾ ಅವರನ್ನು ಬಂಧಿಸಲಾಗಿದೆ. ಅಲ್ಲದೇ ರಾಜ್ಯದ ಹಲವರನ್ನು ವಶಕ್ಕೆ ಪಡೆಯಲಾಗಿದೆ. ದೆಹಲಿಯ ಪ್ರಧಾನ ಕಚೇರಿಯ ಭದ್ರತೆಯನ್ನು ಹೆಚ್ಚಿಸಲಾಗಿದೆ. ಶಾಹೀನ್ ಬಾಗ್ ಪ್ರದೇಶದ ಒಳಗಿನ ಓಖ್ಲಾ ಪ್ರದೇಶ, ಸಿಎಫ್ಐನ ಎಲ್ಲಾ ವಿದ್ಯಾರ್ಥಿಗಳ ಭದ್ರತೆಯನ್ನು ಒಳಗೆ ಹೆಚ್ಚಿಸಲಾಗಿದೆ.
ಪ್ರಸ್ತುತ ಪಿ.ಎಫ್.ಐ ದಾಳಿ ಕುರಿತು ಗೃಹ ಸಚಿವ ಅಮಿತ್ ಶಾ ಅವರ ಸಭೆ ನಡೆಯುತ್ತಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದಾರೆ..
ವರದಿ : ಅಮ್ಮಿ ಸವಣೂರು
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.