ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ರಾಜ್ಯದಲ್ಲಿ ಹಿಜಾಬ್ ನಿಷೇಧವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧದ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿ ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಉಡುಪಿಯ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ವಿದ್ಯಾರ್ಥಿನಿಯರು ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ರಾಜ್ಯ ಸರ್ಕಾರದ ನಿಷೇಧ ಎತ್ತಿ ಹಿಡಿದ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು. ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ವಿಚಾರಣೆಯನ್ನು ಪ್ರರೋಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.