ನವದೆಹಲಿ (www.vknews.in) : ಸುಪ್ರೀಂಕೋರ್ಟ್ನ ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ಅವರು ಶುಕ್ರವಾರ ನಿವೃತ್ತಿ ಹೊಂದಿದರು. ನಾಲ್ಕು ವರ್ಷಗಳಿಗೂ ಹೆಚ್ಚು ಕಾಲ ಈ ಹುದ್ದೆ ನಿರ್ವಹಿಸಿದ ಅವರು ಸುಪ್ರೀಂಕೋರ್ಟ್ನ ಐದನೇ ಹಿರಿಯ ನ್ಯಾಯಮೂರ್ತಿಯಾಗಿದ್ದರು.
ಅವರ ನಿವೃತ್ತಿಯಿಂದಾಗಿ ಸುಪ್ರೀಂಕೋರ್ಟ್ನಲ್ಲಿ ಮಹಿಳಾ ನ್ಯಾಯಮೂರ್ತಿಗಳ ಸಂಖ್ಯೆ ಮೂರಕ್ಕೆ ಇಳಿದಿದೆ. ಪ್ರಸ್ತುತ ಹಿಮಾ ಕೊಹ್ಲಿ, ಬಿ.ವಿ. ನಾಗರತ್ನ ಮತ್ತು ಬೇಲಾ ಎಂ. ತ್ರಿವೇದಿ ಅವರು ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬ್ಯಾನರ್ಜಿ ಅವರು ಸುಪ್ರೀಂಕೋರ್ಟ್ನ 8ನೇ ಮಹಿಳಾ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.