ಶಿವಮೊಗ್ಗ (ವಿಶ್ವ ಕನ್ನಡಿಗ ನ್ಯೂಸ್) : ಹನ್ನೊಂದು ತಿಂಗಳ ಕಂದಮ್ಮವೊಂದು ನೀರಿನ ತೊಟ್ಟಿಯಲ್ಲಿ ಬಿದ್ದು ದಾರುಣವಾಗಿ ಮೃತಪಟ್ಟಿರುವ ಘಟನೆ ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಛಾಯಾಗ್ರಾಹಕ ದೇವರಾಜ್ ಹಾಗೂ ಅನುಷಾ ದಂಪತಿಯ ಮಗ ಅಕ್ಷಯ್ ಮನೆಯ ಮುಂದಿನ ತೊಟ್ಟಿಯಲ್ಲಿ ಬಿದ್ದು ಮೃತಪಟ್ಟಿರುವ ಮಗು.
ಇಂದು ಮಹಾಲಯ ಅಮವಾಸ್ಯೆ ಕಾರಣ ಮನೆಯವರು ಪೂಜೆ ಪುನಸ್ಕಾರದ ಕಡೆ ಗಮನ ಕೊಟ್ಟಿದ್ದರಿಂದ ಅಂಬೆಗಾಲು ಇಡುತ್ತಿದ್ದ ಮಗು ಅರಿವಿಲ್ಲದಂತೆ ತೊಟ್ಟಿಗೆ ಬಿದ್ದಿದೆ. ಸ್ವಲ್ಪ ಹೊತ್ತಿನ ನಂತರ ಮಗುವಿನ ತಾತ ವಾಹನ ತೊಳೆಯಲು ತೊಟ್ಟಿಯಲ್ಲಿ ಬಗ್ಗಿದಾಗ ಮಗು ಬಿದ್ದಿರುವುದು ಕಾಣಿಸಿದೆ. ತಕ್ಷಣ ಶಿಕಾರಿಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿದರೂ ಮಗುವಿನ ಪ್ರಾಣ ಉಳಿಸಲು ಸಾಧ್ಯವಾಗಿಲ್ಲ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.