ನವ ದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ಬಸ್ಸುಗಳು ಸೇರಿದಂತೆ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಸ್ಥಳ ಟ್ರ್ಯಾಕಿಂಗ್ ವ್ಯವಸ್ಥೆ ಮತ್ತು ಪ್ಯಾನಿಕ್ ಬಟನ್ ಅನ್ನು ಸಾರಿಗೆ ಸಚಿವಾಲಯವು ಕಡ್ಡಾಯಗೊಳಿಸಿದೆ. ಮುಂದಿನ ವರ್ಷ ಮಾರ್ಚ್ ನಿಂದ ಇದು ಜಾರಿಗೆ ಬರಲಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.
ಮಕ್ಕಳು ಮತ್ತು ಮಹಿಳೆಯರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಹಳದಿ ನಂಬರ್ ಪ್ಲೇಟ್ಗಳನ್ನು ಹೊಂದಿರುವ ಎಲ್ಲಾ ವಾಣಿಜ್ಯ ವಾಹನಗಳು ಇದನ್ನು ಅನುಸರಿಸಬೇಕು. ಪ್ರಯಾಣಿಕರ ಬಸ್ಸುಗಳು, ಮಿನಿ ಬಸ್ಸುಗಳು, ಶಾಲಾ ಬಸ್ಸುಗಳು, ಕ್ಯಾಬ್ ಮತ್ತು ಟ್ಯಾಕ್ಸಿ ವಾಹನಗಳಲ್ಲಿ ಸ್ಥಳ ಟ್ರ್ಯಾಕಿಂಗ್ ವ್ಯವಸ್ಥೆಯನ್ನು ಅಳವಡಿಸಬೇಕು. ತುರ್ತು ಪರಿಸ್ಥಿತಿಯನ್ನು ಎದುರಿಸಲು ವಾಹನಗಳಲ್ಲಿ ಪ್ಯಾನಿಕ್ ಬಟನ್ ಅಳವಡಿಸಬೇಕು ಎಂದು ವರದಿಯಲ್ಲಿ ಹೇಳಲಾಗಿದೆ.
ಮಹಿಳೆಯರ ಸುರಕ್ಷತೆಗಾಗಿ ಸೀಟಿನ ಪಕ್ಕದಲ್ಲಿ ಪ್ಯಾನಿಕ್ ಬಟನ್ ಹಾಕಬೇಕು. ಈ ಮೂಲಕ ಮಹಿಳೆಯರ ಸುರಕ್ಷತೆಯನ್ನು ಖಾತ್ರಿಪಡಿಸಬಹುದು ಎಂದು ಅಂದಾಜಿಸಲಾಗಿದೆ. ಪ್ಯಾನಿಕ್ ಬಟನ್ ಒತ್ತಿದ ತಕ್ಷಣ ಕಮಾಂಡ್ ಕಂಟ್ರೋಲ್ ಸೆಂಟರ್ ಗೆ ಸಂದೇಶ ತಲುಪುವ ರೀತಿಯಲ್ಲಿ ಸಿಸ್ಟಂ ವಿನ್ಯಾಸಗೊಳಿಸಲಾಗಿದೆ. ವಾಹನವನ್ನು ಟ್ರ್ಯಾಕ್ ಮಾಡುವ ಮೂಲಕ ಮಹಿಳೆಯರ ಸುರಕ್ಷತೆಯನ್ನು ಖಾತ್ರಿಪಡಿಸಬಹುದು ಎಂದು ಸರ್ಕಾರಿ ಮೂಲಗಳು ಹೇಳುತ್ತವೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.