(ವಿಶ್ವ ಕನ್ನಡಿಗ ನ್ಯೂಸ್) : ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ‘ಭಾರತ್ ಜೋಡೋ’ ಯಾತ್ರೆಗೆ ಜೆಡಿಎಸ್ನ ಶಾಸಕ ಎಸ್.ಆರ್. ಶ್ರೀನಿವಾಸ್ ಬೆಂಬಲ ವ್ಯಕ್ತಪಡಿಸಿದ್ದಾರೆ. ‘ರಾಹುಲ್ ಗಾಂಧಿಯನ್ನು ಸ್ವಾಗತಿಸುವುದಾಗಿ ಅವರು ಹೇಳಿದ್ದಾರೆ.
ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಎಸ್.ಆರ್.ಶ್ರೀನಿವಾಸ್ ಮಾಧ್ಯಮದೊಂದಿಗೆ ಮಾತನಾಡಿ, ರಾಹುಲ್ ಗಾಂಧಿ ಅವರು ರಾಷ್ಟ್ರಮಟ್ಟದ ನಾಯಕರಾಗಿದ್ದಾರೆ. ಒಳ್ಳೆ ಉದ್ದೇಶ ಇಟ್ಟುಕೊಂಡು ನಡೆಯುತ್ತಿರುವ ಭಾರತ ಜೋಡೋ ಯಾತ್ರೆಯಲ್ಲಿ ಬಿಜೆಪಿ ಹೊರತುಪಡಿಸಿ ಎಲ್ಲಾ ಪಕ್ಷದ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸುವಂತೆ ಸಂಸದ ಡಿ.ಕೆ. ಸುರೇಶ್ ಅವರು ಕರೆ ನೀಡಿದ್ದಾರೆ. ಸ್ಥಳೀಯ ಮುಖಂಡರೊಂದಿಗೆ ಚರ್ಚಿಸಿ ಈ ಕುರಿತು ತೀರ್ಮಾನ ಕೈಗೊಳ್ಳುತ್ತೇನೆ ಎಂದಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.