ಜೋರ್ಡನ್ (ವಿಶ್ವ ಕನ್ನಡಿಗ ನ್ಯೂಸ್) : 12 ವರ್ಷದ ಬಾಲಕನೋರ್ವನು ತಂದೆಯ ಬಂದೂಕಿನಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಗುಂಡು ತಗುಲಿ ಮೃತಪಟ್ಟಿದ್ದಾನೆ. ಜೋರ್ಡಾನ್ ನ ಅಮ್ಮನ್ ನಲ್ಲಿ ಮಂಗಳವಾರ ಸಂಜೆ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ತನ್ನ ತಂದೆಯ ಬಂದೂಕಿನಿಂದ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಗುಂಡು ತಗುಲಿದೆ. ಬಾಲಕನ ಮೃತದೇಹವನ್ನು ವಿವರವಾದ ಪರೀಕ್ಷೆಗಾಗಿ ವಿಧಿವಿಜ್ಞಾನ ವಿಭಾಗಕ್ಕೆ ಸ್ಥಳಾಂತರಿಸಲಾಗಿದೆ.
ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ. ಜೋರ್ಡಾನ್ ನ ಕಾನೂನಿನ ಪ್ರಕಾರ, ಆತ್ಮರಕ್ಷಣೆಗಾಗಿ ವ್ಯಕ್ತಿಗಳು ತಮ್ಮ ಮನೆಗಳಲ್ಲಿ ಬಂದೂಕುಗಳನ್ನು ಇಟ್ಟುಕೊಳ್ಳಲು ಅನುಮತಿಸಲಾಗಿದೆ. ಇದಕ್ಕಾಗಿ, ಗೃಹ ವ್ಯವಹಾರಗಳ ಸಚಿವಾಲಯದಿಂದ ಪರವಾನಗಿಯನ್ನು ಪಡೆಯಬೇಕಾಗುತ್ತದೆ. ಗನ್ ಅನ್ನು ಹೊಂದಿರುವ ವ್ಯಕ್ತಿಯ ಹೆಸರಿನಲ್ಲಿ ನೋಂದಾಯಿಸಲಾಗುತ್ತದೆ. ಲೈಸೆನ್ಸ್ ಇಲ್ಲದೆ ಬಂದೂಕು ಹಿಡಿದಿರುವ ವ್ಯಕ್ತಿಗೆ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.