ಉಡುಪಿ (ವಿಶ್ವ ಕನ್ನಡಿಗ ನ್ಯೂಸ್ ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಹಿಳಾ ಮಂಡಳಿಗಳ ಒಕ್ಕೂಟ ಉಡುಪಿ ಮತ್ತು ರೋಟರಿ ಕ್ಲಬ್ ಅಂಬಲಪಾಡಿ ಇವರ ಸಹಯೋಗದಲ್ಲಿ ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಿರ್ಮಿಸಿರುವ ಶಿಶುಪಾಲನಾ ಕೇಂದ್ರವನ್ನು ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ವೀಣಾ ವಿವೇಕಾನಂದ, ತಾಲೂಕು ವೈದ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ, ಜಿಲ್ಲಾ ಮಹಿಳಾ ಮಂಡಳಿಗಳ ಅಧ್ಯಕ್ಷೆ ಸರಳಾ.ಬಿ. ಕಾಂಚನ್, ಕಾರ್ಯದರ್ಶಿ ವಸಂತಿ ರಾವ್ ಕೊರಾಡ್ಕಲ್, ರೋಟರಿ ಕ್ಲಬ್ ಅಂಬಲಪಾಡಿ ಅಧ್ಯಕ್ಷ ರೋಟೆರಿಯನ್ ಭಾಸ್ಕರ್ ಶೆಟ್ಟಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.ಶಿಶುಪಾಲನಾ ಕೇಂದ್ರದ ಶಿಕ್ಷಕಿ ರೇವತಿ ಸ್ವಾಗತಿಸಿ, ಮಹಿಳಾ ಶಕ್ತಿ ಕೇಂದ್ರದ ಯೋಜನಾ ಸಂಯೋಜಕಿ ಅನುಷಾ ನಿರೂಪಿಸಿ, ಶಿಶುಪಾಲನಾ ಕೇಂದ್ರದ ಸಹಾಯಕಿ ರಾಜೀವಿ ವಂದಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.