ಉಡುಪಿ ,(ವಿಶ್ವ ಕನ್ನಡಿಗ ನ್ಯೂಸ್ ): ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಬೆಂಗಳೂರು ಇವರ ವತಿಯಿಂದ ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಒದಗಿಸುವ ಸಂಚಾರಿ ಆರೋಗ್ಯ ಕ್ಲಿನಿಕ್ ಯೋಜನೆಗೆ ಶುಕ್ರವಾರ ನಗರಸಭೆಯ ಆವರಣದಲ್ಲಿ ಶಾಸಕ ಕೆ.ರಘುಪತಿ ಭಟ್ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ಪೌರಾಯುಕ್ತ ಡಾ. ಉದಯ್ ಕುಮಾರ್ ಶೆಟ್ಟಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್, ಕಾರ್ಮಿಕ ನಿರೀಕ್ಷಕ ವಿಜೇಂದ್ರ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಈ ಸಂಚಾರಿ ವಾಹನವು ನವೆಂಬರ್ 19 ರ ವರೆಗೆ ನಗರದ ವಿವಿಧ ವಾರ್ಡ್ಗಳಲ್ಲಿ ಸಂಚರಿಸಲಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.