ಶಿವಮೊಗ್ಗ (ವಿಶ್ವ ಕನ್ನಡಿಗ ನ್ಯೂಸ್) : ರಕ್ಷಣಾ ಕಾರ್ಯಾಚರಣೆ ವೇಳೆ ಸೆರೆಹಿಡಿದ ಹಾವಿನ ತಲೆಗೆ ಮುತ್ತಿಡಲು ಯತ್ನಿಸಿದ ಯುವಕನಿಗೆ ನಾಗರಹಾವು ಕಚ್ಚಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬೊಮ್ಮನಕಟ್ಟೆಯಲ್ಲಿ ನಡೆದಿದೆ. ಕಚ್ಚಿದ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಯುವಕ ಹಾವನ್ನು ಹಿಡಿದ ನಂತರ ತಲೆಯನ್ನು ಚುಂಬಿಸಲು ಪ್ರಯತ್ನಿಸುತ್ತಿರುವಾಗ, ಹಾವು ತಿರುಗಿ ತುಟಿಯ ಮೇಲೆ ಕಚ್ಚಿತು. ನಂತರ ಹಾವು ಯುವಕನ ಕೈಯಿಂದ ಜಾರಿ ನೆಲಕ್ಕೆ ಬಿದ್ದಿತು. ಸುತ್ತಮುತ್ತಲಿನವರು ಹಾವನ್ನು ಹಿಡಿಯಲು ಪ್ರಯತ್ನಿಸಿದರು ಆದರೆ ಸಾಧ್ಯವಾಗಲಿಲ್ಲ.
ಕಚ್ಚಿದ ಯುವಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.