ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ ದಕ ಜಿಲ್ಲಾ ಸಮಿತಿ ವತಿಯಿಂದ ನಗರದ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗಾಂಧಿ ಚಿಂತನೆಯ ಪ್ಲೇ ಕಾರ್ಡ್ ಪ್ರದರ್ಶಿಸಿ ಗಾಂಧಿ ಜಯಂತಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ SDTU ಜಿಲ್ಲಾಧ್ಯಕ್ಷ ಝಾಕೀರ್ ಉಳ್ಳಾಲ್ ಸಾತ್ವಿಕ ಪ್ರತಿಭಟನೆಯಿಂದ ಮಾನವನ ದೌರ್ಜನ್ಯ ಪ್ರವೃತ್ತಿ ಕ್ರಮೇಣ ಅಳಿಸಿಹೋಗಿ ಮಾನವ ಮಾನವನಾಗುತ್ತಾನೆ ಎಂಬ ನಂಬಿಕೆ ಸತ್ಯಾಗ್ರಹ ಶಾಸ್ತ್ರದ ಅಡಿಗಲ್ಲು ಎಂದು ನಂಬಿದ ಮಹಾತ್ಮಾ ಗಾಂಧೀಜಿ ಬ್ರಿಟೀಷರ ಅನ್ಯಾಯದ ವಿರುದ್ಧ ಹೋರಾಡಲು ಅಭಿವೃದ್ಧಿ ಪಡಿಸಿದ ವಿಶಿಷ್ಟ ತಂತ್ರವೇ ಸತ್ಯಾಗ್ರಹವಾಗಿತ್ತು. ಸಮಾಜದಲ್ಲಿ ಮೂಲಭೂತ ಬದಲಾವಣೆಗಾಗಿ ಗಾಂಧೀಜಿ ಕಂಡುಕೊಂಡ ಅಹಿಂಸಾ ಸತ್ಯಾಗ್ರಹ ಹೋರಾಟಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲೂ ಮನ್ನಣೆ ಲಭಿಸಿದ್ದು ಭಾರತಕ್ಕೆ ಹೆಮ್ಮೆಯಾಗಿದೆ ಎಂದರು.
SDTU ರಾಜ್ಯ ಕಾರ್ಯದರ್ಶಿ ಶೆರೀಫ್ ಪಾಂಡೇಶ್ವರ್, ಕೋಶಾಧಿಕಾರಿ ಖಾದರ್ ಫರಂಗಿಪೇಟೆ, ಜಿಲ್ಲಾ ಕಾರ್ಯದರ್ಶಿ ಮುಸ್ತಫಾ ಪರ್ಲಿಯಾ, ಮಂಗಳೂರು ಕ್ಷೇತ್ರ ಸಮಿತಿ ಅಧ್ಯಕ್ಷ ಅಬ್ದುಲ್ ರಹಿಮಾನ್ ಮುನ್ನೂರು, ಪಡುಬಿದ್ರೆ ಗ್ರಾಮ ಪಂಚಾಯತ್ ಸದಸ್ಯ ಫಿರೋಝ್ ಪಡುಬಿದ್ರೆ, ಇರ್ಫಾನ್ ಉಳಾಯಿಬೆಟ್ಟು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.