ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆ, ಶಕ್ತಿ ಪದವಿ ಪೂರ್ವ ಕಾಲೇಜು ಮತ್ತು ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ಜಂಟಿ ಆಶ್ರಯದಲ್ಲಿ ಇಂದು ಮಹಾತ್ಮಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಕ್ತಿ ವಿದ್ಯಾ ಸಂಸ್ಥೆಯ ಅಧ್ಯಾಪಕರ ತಂಡವು ಭಜನೆಯನ್ನು ನಡೆಸಿಕೊಟ್ಟಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತಾಧಿಕಾರಿ ಡಾ. ಕೆ.ಸಿ ನಾೈಕ್ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಅಧ್ಯಾಪಕರಾದ ಶರಣಪ್ಪ ರವರು ಗಾಂಧೀಜಿ ಜಯಂತಿಯ ಮಹತ್ವವನ್ನು ವಾಚಿಸಿದರು. ಈ ಸಂದರ್ಭದಲ್ಲಿ ಶಿಕ್ಷಕರಿಂದ ಸರ್ವಧರ್ಮ ಪ್ರಾರ್ಥನೆ ನೆರವೇರಿತು. ಇದೇ ಸಂದರ್ಭದಲ್ಲಿ ದಸರಾ ಹಬ್ಬದ ಪ್ರಯುಕ್ತ 7ನೇ ದಿನವಾದ ಭಾನುವಾರದಂದು ಶಾರದಾ ಪೂಜೆಯನ್ನು ಸರಸ್ವತಿ ಪ್ರತಿಮೆಯ ಮುಂಭಾಗದಲ್ಲಿ ನೆರವೇರಿಸಲಾಯಿತು.
ಕಾರ್ಯಕ್ರಮದ ವೇದಿಕೆಯಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಡಾ. ಕೆ.ಸಿ ನಾೈಕ್, ಆಡಳಿತ ಮಂಡಳಿ ಸದಸ್ಯೆ ಶ್ರೀಮತಿ ಸಗುಣ ಸಿ. ನಾೈಕ್, ಪ್ರಧಾನ ಸಲಹೆಗಾರ ರಮೇಶ ಕೆ., ಅಭಿವೃದ್ಧಿ ಅಧಿಕಾರಿ ಪ್ರಖ್ಯಾತ್ ರೈ, ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಪೃಥ್ವಿರಾಜ್, ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ವಿದ್ಯಾ ಕಾಮತ್ ಜಿ., ಶಿಕ್ಷಕ-ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರವನ್ನು ಕನ್ನಡ ಅಧ್ಯಾಪಕರಾದ ಶರಣಪ್ಪ ರವರು ನಿರೂಪಿಸಿ ವಂದಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.