ತಿರುವನಂತಪುರಂ (ವಿಶ್ವ ಕನ್ನಡಿಗ ನ್ಯೂಸ್) : ಕೇರಳ ಪೊಲೀಸರ 873 ಅಧಿಕಾರಿಗಳು ಪಾಪ್ಯುಲರ್ ಫ್ರಂಟ್ ನೊಂದಿಗೆ ಸಂಪರ್ಕ ಹೊಂದಿದ್ದಾರೆ, ವರದಿಯನ್ನು ಡಿಜಿಪಿಗೆ ಹಸ್ತಾಂತರಿಸಲಾಗಿದೆ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಡಿಜಿಪಿಗೆ ಕ್ರಮ ತೆಗೆದುಕೊಳ್ಳಲು ಶಿಫಾರಸು ಮಾಡಿದೆ ಎಂಬ ಸುದ್ದಿ ಆಧಾರರಹಿತವಾಗಿದೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಅಂತಹ ಸುದ್ದಿ ಇಂದು ಬೆಳಿಗ್ಗೆ ಹರಡಿತ್ತು. ಪಿಎಫ್ಐಗೆ ಸಂಬಂಧಿಸಿದ ಅಧಿಕಾರಿಗಳ ಹೆಸರನ್ನು ತನಿಖಾ ಸಂಸ್ಥೆ ಡಿಜಿಪಿಗೆ ಹಸ್ತಾಂತರಿಸಿದೆ ಎಂದು ವರದಿಯಾಗಿದೆ. ಪಾಪ್ಯುಲರ್ ಫ್ರಂಟ್ ಮೇಲಿನ ನಿಷೇಧದ ನಂತರ ಎನ್ಐಎ ನಡೆಸುತ್ತಿರುವ ತನಿಖೆಯ ಭಾಗವಾಗಿ ಪೊಲೀಸ್ ಅಧಿಕಾರಿಗಳಿಗೆ ಸಂಬಂಧಿಸಿದ ಮಾಹಿತಿಯನ್ನು ದಾಖಲಿಸಲಾಗಿದೆ ಎಂದು ವರದಿಯಾಗಿದೆ ಆದರೆ ಇದನ್ನು ಕೇರಳ ಪೊಲೀಸ್ ಅದಾರ ರಹಿತ ವರದಿ ಎಂದು ಹೇಳಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.