ಸುಳ್ಯ(ವಿಶ್ವಕನ್ನಡಿಗ ನ್ಯೂಸ್): ತಾಲೂಕಿನ ಎಲಿಮಲೆ ಸಮೀಪದ ಜಬಳೆಯಲ್ಲಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಅಣ್ಣ, ತಂಗಿ ಇಬ್ಬರೂ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಬಾಜಿನಡ್ಕದ ನಿಶಾಂತ್ ಹಾಗು ಆತನ ಸಹೋದರಿ ಮೋಕ್ಷಾ ಎಂಬವರು ಮೃತರು ಎಂದು ತಿಳಿದುಬಂದಿದೆ. ನಿಶಾಂತ್ ತನ್ನ ತಂಗಿಯನ್ನು ಕರೆದುಕೊಂಡು ಎಲಿಮಲೆಯಿಂದ ಮನೆಗೆ ಹೋಗುತ್ತಿದ್ದ ವೇಳೆ ಇವರು ಪ್ರಯಾಣಿಸಿದ್ದ ದ್ವಿಚಕ್ರ ವಾಹನ ಮತ್ತು ಸುಳ್ಯ ಕಡೆಯಿಂದ ಬರುತ್ತಿದ್ದ ಕಾರು ಮಧ್ಯೆ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ನಿಶಾಂತ್ ಮೃತಪಟ್ಟರೆ, ತೀವ್ರ ಗಾಯಗೊಂಡಿದ್ದ ನಿಶಾಂತ್ನ ತಂಗಿ ಮೋಕ್ಷರನ್ನು ಆಸ್ಪತ್ರೆಗೆ ಕರೆ ತರಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರೂ ಮೃತಪಟ್ಟಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.