ಮಾಲೂರು (ವಿಶ್ವಕನ್ನಡಿಗ ನ್ಯೂಸ್): ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಂದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭವನ್ನು ಕೋಲಾರದ ಸರ್ವಜ್ಞ ಪಾರ್ಕ್ ಮುಂಭಾಗದಲ್ಲಿನ ಡ್ಯಾಫೋಡಿಲ್ಸ್ ಇಂಗ್ಲಿಷ್ ತರಬೇತಿ ಅಕಾಡೆಮೆಯಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಸಂಯೋಜಕರಾದ ಡಾ.ಮಂಜುನಾಥ್ ರವರು ಮಾತನಾಡುತ್ತಾ “ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡು ಉತ್ತಮ ಜೀವನಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಜೀವನದಲ್ಲಿ ನೆಮ್ಮದಿಯನ್ನು ಪಡೆಯಲು ಸಾಧ್ಯವಿದೆ, ಮುಂದೆ ಕಾಲೇಜಿನ ಏಳಿಗೆಯಲ್ಲಿ ಭಾಗಿಗಳಾಗುವುದು ಹಿರಿಯ ವಿದ್ಯಾರ್ಥಿಗಳ ಕರ್ತವ್ಯ, ಹಾಗೇ ವಿದ್ಯಾರ್ಥಿಗಳು ಉತ್ತಮ ಸಂಸ್ಕಾರವನ್ನು ರೂಢಿಸಿಕೊಂಡಿರುವುದರಿಂದ ಉನ್ನತ ಶಿಕ್ಷಣ ಅಥವಾ ಉದ್ಯೋಗದೊಂದಿಗೆ ತಮ್ಮ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯವಿದೆ” ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅಂತರರಾಷ್ಟ್ರೀಯ ಆಂಗ್ಲಭಾಷಾ ಸಂಪನ್ಮೂಲ ವ್ಯಕ್ತಿಗಳಾದ ಡಾ.ರಮೇಶ್ ರವರು ಮಾತನಾಡುತ್ತಾ “ಯಶಸ್ಸು ಎನ್ನುವುದು ಕೆಲವು ಸರಳ ಶಿಸ್ತುಗಳಿಗಿಂತ ಕೂಡಿರುತ್ತದೆ. ಅದು ಹೆಚ್ಚೇನೂ ಇಲ್ಲ, ಪ್ರತಿದಿನ ಅಭ್ಯಾಸ ಹಾಗೂ ಸತತ ಪ್ರಯತ್ನದ ಫಲವಾಗಿ ಅದನ್ನು ಗಳಿಸಲು ಸಾಧ್ಯ ಹಾಗೇ ಯುವಕರು ನಮ್ಮ ದೇಶದ ಶಕ್ತಿ. ರಾಷ್ಟ್ರ ನಿರ್ಮಾಣದ ಜವಾಬ್ದಾರಿ ಅವರ ಮೇಲಿದೆ. ಅವರು ಬುದ್ಧಿವಂತಿಕೆ, ಜ್ಞಾನ ಮತ್ತು ಧೈರ್ಯದ ಗುಣಗಳನ್ನು ಬೆಳೆಸಿಕೊಳ್ಳಬೇಕು. ಕಾನೂನು ಪದವೀಧರರಿಗೆ ಸಾಕಷ್ಟು ಉತ್ತಮ ಅವಕಾಶಗಳಿವೆ. ಅವರು ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು. ಇಂದು ನ್ಯಾಯಾಂಗ ವ್ಯವಸ್ಥೆಯು ಸಾಕಷ್ಟು ವಿಸ್ತರಿಸಿಕೊಂಡಿದೆ. ಯಶಸ್ವಿ ವೃತ್ತಿಪರರಾಗಿ ಹೊರಹೊಮ್ಮಲು ಅಹರ್ನಿಷಿ ಪ್ರಯತ್ನಿಸಬೇಕು. ಎಲ್ಲಕ್ಕೂ ಮುಖ್ಯವಾಗಿ ವಿದ್ಯಾರ್ಥಿಗಳು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಮತ್ತು ಪ್ರಾಮಾಣಿಕತೆ, ನಿಷ್ಠೆ, ಬದ್ಧತೆ, ನಂಬಿಕೆ ಮೇಲೆ ಜೀವನವನ್ನು ರೂಪಿಸಿಕೊಳ್ಳಬೇಕು ಎಂದರು.
ಹಿರಿಯ ವಿದ್ಯಾರ್ಥಿಗಳಾದ ಮಧುಶ್ರೀ, ಜ್ಯೋತಿ, ನವೀನ್ ಕುಮಾರ್, ಅಭಿಜಿತ್, ಚೈತ್ರಾ, ಕಿರಣ್, ಗಂಗಾಧರ್, ರಾಜೇಶ್
ಇವರಿಗೆ ಕಿರಿಯ ವಿದ್ಯಾರ್ಥಿಗಳಾದ ಲಕ್ಕೂರು ಎಂ.ನಾಗರಾಜ್, ಕುಮಾರಿ ರಮ್ಯ, ಲಿಖಿತ್ ರಾಜ್, ರವಿ, ರಾಘವೇಂದ್ರ, ನಾಗೇಂದ್ರ, ಮನೋಜ್, ಗಿರೀಶ್, ಚಲಪತಿ ಇತರೆ ಎಲ್ಲಾ ವಿದ್ಯಾರ್ಥಿಗಳು ಸ್ವಾಗತಿಸಿದರು.
ಇದೇ ಸಂದರ್ಭದಲ್ಲಿ ಬೆಂಗಳೂರು ಉತ್ತರ ವಿವಿ ಪತ್ರಿಕೋದ್ಯಮ ಹಾಗೂ ಸಂವಹನ ವಿಭಾಗದ ಸಂಯೋಜಕರಾದ ಡಾ.ಮಂಜುನಾಥ್ ಹಾಗೂ ಅಂತರಾಷ್ಟ್ರೀಯ ಆಂಗ್ಲಭಾಷಾ ಸಂಪನ್ಮೂಲ ವ್ಯಕ್ತಿಗಳಾದ ಡಾ.ರಮೇಶ್ ರವರಿಗೆ ಕಿರಿಯ ವಿದ್ಯಾರ್ಥಿಗಳಿಂದ ಪ್ರೀತಿಯ ಸನ್ಮಾನವನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಪ್ರಥಮ ವರ್ಷದ ಕಿರಿಯ ವಿದ್ಯಾರ್ಥಿಗಳು ಹಾಗೂ ಹಿರಿಯ ವಿದ್ಯಾರ್ಥಿಗಳು ಹಾಜರಿದ್ದರು.
ವರದಿ: ಲಕ್ಕೂರು ಎಂ.ನಾಗರಾಜ್
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.