(
ವಿಶ್ವ ಕನ್ನಡಿಗ ನ್ಯೂಸ್) : ಜಸ್ಪ್ರೀತ್ ಬುಮ್ರಾ ಗಾಯಗೊಂಡು ಟಿ20 ವಿಶ್ವಕಪ್ ನಿಂದ ಹೊರಗುಳಿದಿದ್ದಾರೆ. ಬುಮ್ರಾ ಬದಲಿಗೆ ಮೊಹಮ್ಮದ್ ಶಮಿ ಅಥವಾ ಮೊಹಮ್ಮದ್ ಸಿರಾಜ್ ತಂಡದಲ್ಲಿ ಯಾರಾಗಬೇಕು ಎಂಬ ಚರ್ಚೆ ಈಗ ವೇಗ ಪಡೆದುಕೊಂಡಿದೆ. ಭಾರತ ತಂಡದ ಮ್ಯಾನೇಜ್ಮೆಂಟ್ ಇನ್ನೂ ಈ ಬಗ್ಗೆ ಗೊಂದಲಕ್ಕೊಳಗಾಗಿರಬಹುದು, ಆದರೆ ಮಾಜಿ ಟೆಸ್ಟ್ ಕ್ರಿಕೆಟಿಗ ಸುನಿಲ್ ಗವಾಸ್ಕರ್ ತಮ್ಮ ಆಯ್ಕೆಯನ್ನು ಘೋಷಿಸಿದ್ದಾರೆ.
ಟಿ ೨೦ ವಿಶ್ವಕಪ್ ನಲ್ಲಿ ಮೊಹಮ್ಮದ್ ಸಿರಾಜ್ ಆಡುವುದನ್ನು ನೋಡಲು ಬಯಸುತ್ತೇನೆ ಎಂದು ಗವಾಸ್ಕರ್ ಅವರು ಹೇಳಿದ್ದಾರೆ. ಅಂದರೆ, ಅವರು ಮೊಹಮ್ಮದ್ ಶಮಿಗಿಂತ ಸಿರಾಜ್ ಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಮೊಹಮ್ಮದ್ ಸಿರಾಜ್ ಇತ್ತೀಚೆಗೆ ಮುಕ್ತಾಯವಾದ ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಮತ್ತು ಮೂರು ಏಕದಿನ ಸರಣಿಗಳಲ್ಲಿ ತಮ್ಮ ಬೌಲಿಂಗ್ ಪ್ರದರ್ಶನದಿಂದ ಎಲ್ಲರ ಮೇಲೂ ಪ್ರಭಾವ ಬೀರಿದ್ದಾರೆ ಎಂದು ಅವರು ಹೇಳಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು 2-1ರಿಂದ ಗೆದ್ದ ನಂತರ ಬುಮ್ರಾ ಅವರ ಸ್ಥಾನವನ್ನು ಯಾರು ತುಂಬಬಹುದು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗವಾಸ್ಕರ್, “ನಾನು ಸಿರಾಜ್ ಅವರನ್ನು ತಂಡದಲ್ಲಿ ಸೇರಿಸಿಕೊಳ್ಳಲು ಬಯಸುತ್ತೇನೆ” ಎಂದು ಗವಾಸ್ಕರ್ ಹೇಳಿದರು. ಅವರು ಉತ್ತಮವಾಗಿ ಬೌಲಿಂಗ್ ಮಾಡುತ್ತಿದ್ದಾರೆ. ಶಮಿ ಈಗ ಸ್ವಲ್ಪ ಸಮಯದಿಂದ ಆಡುತ್ತಿಲ್ಲ, ಆದ್ದರಿಂದ ಅವರನ್ನು ನೇರವಾಗಿ ವಿಶ್ವಕಪ್ ಗೆ ಕರೆ ತರವುದರಲ್ಲಿ ಅರ್ಥವಿಲ್ಲ.
ಶಮಿ ಅವರ ಸಾಮರ್ಥ್ಯದ ಬಗ್ಗೆ ನನಗೆ ಯಾವುದೇ ಅನುಮಾನವಿಲ್ಲ. ಆದರೆ ಅವರು ಕ್ರಿಕೆಟ್ ಆಡಲಿಲ್ಲ ಎಂಬುದು ಸಹ ಸತ್ಯ. ಕೋವಿಡ್ ನಂತರ ಮರಳುವುದು ಸುಲಭವಲ್ಲ. ಮತ್ತೊಂದೆಡೆ, ಸಿರಾಜ್ ಅವರನ್ನು ನೋಡಿ, ಅವರು ಎಷ್ಟು ಅದ್ಭುತವಾಗಿ ಬೌಲಿಂಗ್ ಮಾಡುತ್ತಿದ್ದಾರೆ,” ಎಂದು ಗವಾಸ್ಕರ್ ಹೇಳಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.