ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಮಹಿಳಾ CISF ಪಿಎಸ್ ಐ ಒಬ್ಬರು ಕರ್ತವ್ಯದಲ್ಲಿರುವಾಗಲೇ ಗುಂಡು ಹೊಡೆದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪಣಂಬೂರಿನ ನವಮಂಗಳೂರು ಬಂದರು ಪ್ರಾಧಿಕಾರದ ಮೊದಲ ಗೇಟ್ ನಲ್ಲಿ ನಡೆದಿದೆ. ರಾಜಸ್ಥಾನ ಮೂಲದ ಜ್ಯೋತಿ ಬಾಯಿ (33) ಆತ್ಮಹತ್ಯೆಗೆ ಯತ್ನಿಸಿದ ಮಹಿಳಾ ಪಿಎಸ್ ಐ.
ಗಂಭೀರ ಗಾಯಗೊಂಡ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಕೌಟುಂಬಿಕ ವಿವಾದದ ಹಿನ್ನೆಲೆಯಲ್ಲಿ ಮನ ನೊಂದು ಡೆತ್ ನೋಟ್ ಬರೆದಿಟ್ಟು ಗುಂಡು ಹೊಡೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.