ಚಿಕ್ಕಬಳ್ಳಾಪುರ,(ವಿಶ್ವ ಕನ್ನಡಿಗ ನ್ಯೂಸ್):ಚುನಾವಣೆ ಪ್ರಕ್ರಿಯೆಯು ಆಸಕ್ತಿದಾಯಕವಾದ ವಿಚಾರವಾಗಿದೆ. ವಿದ್ಯಾರ್ಥಿಗಳಿಗೆ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಲು ಶಾಲಾ ಮಟ್ಟದಲ್ಲಿಯೇ ಸ್ಪರ್ಧೆಗಳನ್ನು ಏರ್ಪಡಿಸುವ ಮೂಲಕ ಪೆÇ್ರೀತ್ಸಾಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪಿ.ಶಿವಶಂಕರ್ ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ “ರಾಷ್ಟ್ರೀಯ ಮತದಾರರ ದಿನಾಚರಣೆ” ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಚಟುವಟಿಕೆಗಳನ್ನು ಆಯೋಜಿಸುವ ಸಂಬಂಧ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮತದಾನದ ಕುರಿತು ಜಾಗೃತಿ ಮೂಡಿಸಲು ಪ್ರೌಢಶಾಲೆ, ಪದವಿ ಪೂರ್ವಶಿಕ್ಷಣ, ಪದವಿ, ಸ್ನಾತಕೋತ್ತರ ಹಾಗೂ ವೈದ್ಯಕೀಯ ಕಾಲೇಜು, ತಾಂತ್ರಿಕ ಕಾಲೇಜುಗಳಲ್ಲಿನ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಅರಿವು ಮೂಡಿಸಬೇಕು. ಸ್ಪರ್ಧೆಗಳನ್ನು ಏರ್ಪಡಿಸುವ ಮೂಲಕ ಅವರಲ್ಲಿರುವ ಕೌಶಲ್ಯ ಹಾಗೂ ಪ್ರತಿಭೆಯನ್ನು ಅನಾವರಣಗೊಳಿಸಲು ಇದು ಪ್ರಮುಖ ವೇದಿಕೆಯಾಗಲಿದೆ. ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಗುಣಮಟ್ಟದ ಸ್ಪರ್ಧೆಗಳನ್ನು ಆಯೋಜಿಸಬೇಕು ಎಂದು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.
ವಿದ್ಯಾರ್ಥಿಗಳಿಗೆ ಮತದಾನದ ಪ್ರಕ್ರಿಯೆ ಹಾಗೂ ಸ್ವೀಪ್ ಚಟುವಟಿಕೆಗಳ ಕುರಿತು ಅರಿವು ಮೂಡಿಸಲು ರಸಪ್ರಶ್ನೆ, ಪ್ರಬಂಧ ಸ್ಪರ್ಧೆ ಹಾಗೂ ಪೆÇೀಸ್ಟರ್ ಡಿಸೈನ್ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಾದವರಿಗೆ ಆಕರ್ಷಕ ಬಹುಮಾನದ ಜೊತೆಗೆ ಪ್ರಮಾಣಪತ್ರವನ್ನು ನೀಡಿ ಪೆÇ್ರೀತ್ಸಾಹಿಸಬೇಕು. ಪ್ರಥಮ ಸ್ಥಾನ ಹಾಗೂ ದ್ವೀತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ತಾಲ್ಲೂಕು ಮಟ್ಟಕ್ಕೆ ಅದೇ ರೀತಿ ತಾಲ್ಲೂಕು ಮಟ್ಟದಿಂದ ಜಿಲ್ಲಾ ಮಟ್ಟಕ್ಕೆ ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಮಾತ್ರ ರಾಜ್ಯ ಮಟ್ಟಕ್ಕೆ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪ್ರಾಶುಂಪಾಲರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ತೇ.ಮೀಂ.ಅನ್ಸಾರಿ ಚಿಕ್ಕಬಳ್ಳಾಪುರ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.