ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನ ಮನೆಯಿಂದ ನಾಪತ್ತೆಯಾಗಿದ್ದ ಭಾರ್ಗವಿ (14) ಎಂಬ ಬಾಲಕಿ ಗೋವಾದಲ್ಲಿ ಪತ್ತೆಯಾಗಿದ್ದಾಳೆ. ಕಳೆದ ಸೋಮವಾರ ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಈಕೆ, ಬಸ್ ಮೂಲಕ ಮುಂಜಾನೆ 3 ಗಂಟೆಗೆ ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿದ್ದಳು. ಮಂಗಳೂರಿನಿಂದ ಆಕೆ ನೇರವಾಗಿ ಗೋವಾಕ್ಕೆ ಪ್ರಯಾಣಿಸಿರಬಹುದು ಎಂದು ಅಂದಾಜಿಸಲಾಗಿದೆ.
ಬಾಲಕಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದ ಕಾರಣ ಮನನೊಂದ ಮನೆಯಿಂದ ನಾಪತ್ತೆಯಾಗಿದ್ದಳು ಎನ್ನಲಾಗಿದ್ದು, ಕೇವಲ ಮೂರು ಸಾವಿರ ರೂಪಾಯಿ ನಗದಿನ ಜೊತೆ ಮನೆಯಿಂದ ತೆರಳಿದ್ದಳು ಎಂದು ತಿಳಿದಿಬಂದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.