ಚಿಕ್ಕಬಳ್ಳಾಪುರ,(ವಿಶ್ವ ಕನ್ನಡಿಗ ನ್ಯೂಸ್): ದೇಶದ ಭದ್ರತೆಯ ವಿಚಾರದಲ್ಲಿ ನಮ್ಮ ಸೈನಿಕರು ಗಡಿಯಲ್ಲಿ ಹೋರಾಟ ಮಾಡುತ್ತಿದ್ದಾರೆ ಆಂತರಿಕವಾಗಿ ಯಾವುದೇ ಅಭದ್ರತೆ ಸೃಷ್ಠಿಯಾಗದಂತೆ ನೋಡಿಕೊಂಡು ಸಮಾಜ ಘಾತಕರನ್ನು ಮಟ್ಟ ಹಾಕುವುದರಲ್ಲಿ ಅಹರ್ನಿಷಿಯಾಗಿ ದುಡಿಯುತ್ತಿರುವ ಬಹುದೊಡ್ಡ ಪಡೆಯಂದರೆ ಅದು ನಮ್ಮ ಪೊಲೀಸ್ ಪಡೆ ಎಂದು ಜಿಲ್ಲಾಧಿಕಾರಿ ಎನ್.ಎಂ ನಾಗರಾಜ್ ಹೇಳಿದರು.
ಅಣಕನೂರಿನ ಜಿಲ್ಲಾ ಪೆÇಲೀಸ್ ಕಚೇರಿ ಆವರಣದಲ್ಲಿ ಶುಕ್ರವಾರದಂದು ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಿದ್ದ ಪೊಲೀಸ್ ಸಂಸ್ಮರಣಾ ದಿನ ಕಾರ್ಯಕ್ರಮದಲ್ಲಿ ಉತ್ತಮ ಪೊಲೀಸ್ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದ ಅವರು ಜನ ನೆಮ್ಮದಿಯಿಂದ ಜೀವನ ನಡೆಸಲು ಪೊಲೀಸರು ಪ್ರಮುಖ ಪಾತ್ರವಹಿಸಿದ್ದಾರೆ ಜನಗಳಿಗೆ ಸಂಕಷ್ಟ ಬಂದಾಗ ತಕ್ಷಣ ಸ್ಪಂದಿಸುವ ಪೊಲೀಸ್ ಇಲಾಖೆಯ ಕಾರ್ಯ ಶ್ಲಾಘನೀಯವಾದದ್ದು ಎಂದರು.
ರಾಜ್ಯದಲ್ಲಿ ಜನಸಾಮಾನ್ಯರ ಆಸ್ತಿಪಾಸ್ತಿಗಳು ಸಂರಕ್ಷಣೆ ಮಾಡುವ ಜೊತೆಗೆ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದೆ ಎಂದ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಶಾಂತಿ ನೆಲೆಸಲು ಜಿಲ್ಲಾಡಳಿತದೊಂದಿಗೆ ಪೊಲೀಸ್ ಇಲಾಖೆ ಸಂಪೂರ್ಣ ಸಹಕಾರ ನೀಡುತ್ತಿದೆ ಸಾರ್ವಜನಿಕರು ಸಹ ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಿ ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಅಪರಾಧ ಮುಕ್ತ ಮಾಡಲು ಸಹಕರಿಸಬೇಕೆಂದು ಮನವಿ ಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್. ನಾಗೇಶ್ ಮಾತನಾಡಿ ಪ್ರತಿ ವರ್ಷ ಅಕ್ಟೋಬರ್ 21 ರಂದು ಪೊಲೀಸ್ ಸಂಸ್ಮರಣಾ ದಿನ ಆಚರಿಸಲಾಗುತ್ತಿದೆ ಇಲಾಖೆಯನ್ನು ಜನಸ್ನೇಹಿ ಮಾಡುವ ನಿಟ್ಟಿನಲ್ಲಿ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಅದರ ಜೊತೆಗೆ ಸಂಚಾರ ನಿಯಮಗಳನ್ನು ಪಾಲಿಸಲು ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಲಾಗುತ್ತಿದೆ ಎಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಜನರ ರಕ್ಷಣೆಗಾಗಿ ಪೊಲೀಸ್ ಇಲಾಖೆಯ ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದರು.
ಈ ವೇಳೆಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಹುತಾತ್ಮ ಪೋಲಿಸರಿಗೆ ಗೌರವ ಸಲ್ಲಿಸಲಾಯಿತು, ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಚಿಕ್ಕಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ ವಾಸುದೇವ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯ ಸಿಪಿಐಗಳು, ಪಿಎಸ್ಐ,ಎಎಸ್ಐ ಹಾಗೂ ಪೋಲಿಸ್ ಸಿಬ್ಬಂದಿ,ಪೋಲಿಸ್ ಇಲಾಖೆಯ ಕುಟುಂಬ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
ವರದಿ:ತೇ.ಮೀಂ.ಅನ್ಸಾರಿ ಚಿಕ್ಕಬಳ್ಳಾಪುರ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.