ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ಮಂಗಳೂರು ವಿಶ್ವವಿದ್ಯಾನಿಲಯವು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ಒಂದು ಉತ್ತಮ ಶೈಕ್ಷಣಿಕ ವಾತಾವರಣವನ್ನು ನೀಡುತ್ತಿದ್ದ ವಿಶ್ವವಿದ್ಯಾಲಯ. ಆದರೆ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಪೂರಕವಾದ ವಾತಾವರಣವನ್ನು ಸೃಷ್ಠಿಸುವಲ್ಲಿ ವಿಶ್ವವಿದ್ಯಾಲಯವು ವಿಫಲವಾಗುತ್ತಿರುವುದು, ವಿದ್ಯಾರ್ಥಿಗಳು ಹಲವಾರು ಸಮಸ್ಯೆಯನ್ನು ಎದುರಿಸಬೇಕಾಗಿ ಬಂದಿದೆ.
UUCMS ತಂತ್ರಾಂಶದ ಲೋಪದೋಶದಿಂದ NEP ಯ ಪ್ರಥಮ ವರ್ಷದ ಪದವಿ ಮುಗಿಸಿರುವ ವಿದ್ಯಾರ್ಥಿಗಳ ಮೌಲ್ಯಮಾಪನವನ್ನು ಮಾಡಿ, ಫಲಿತಾಂಶವನ್ನು ನೀಡದೆ ವಿದ್ಯಾರ್ಥಿಗಳು ಗೊಂದಲದಲ್ಲಿ ಶಿಕ್ಷಣವನ್ನು ಮುಂದುವರಿಸುವಂತೆ ಆಗಿದೆ . ವಿದ್ಯಾರ್ಥಿಗೆ ದೊರೆಯುವ ಎಲ್ಲಾ ಸೌಲಭ್ಯಗಳಿಂದ ವಿದ್ಯಾರ್ಥಿಗಳು ವಂಚಿತರಾಗುವಂತೆ ಹಾಗೂ ಬೇರೆ ಕಾಲೇಜಿಗೆ ವರ್ಗಾವಣೆಯನ್ನು ವಿದ್ಯಾರ್ಥಿ ಪಡೆಯದ ರೀತಿ ಸಮಸ್ಯೆಯು ಎದುರಾಗಿದೆ .
ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯವು ಸರಿಯಾದ ಸಮಯಕ್ಕೆ ಅಂಕಪಟ್ಟಿ ವಿತರಣೆಯನ್ನು ನಡೆಸುತ್ತಿಲ್ಲ, 2021 ರಲ್ಲಿ ಅಂತಿಮ ವರ್ಷದ ಪೂರೈಸಿದ ವಿದ್ಯಾರ್ಥಿಗಳಿಗೆ ಪ್ರಸ್ತುತ ವಿದ್ಯಾಭ್ಯಾಸ ನಡೆಸುತ್ತಿರುವ, B.com ಹೊರತಾಗಿ ಬಹುತೇಕ ವಿದ್ಯಾರ್ಥಿಗಳಿಗೆ ಅಂಕಪಟ್ಟಿಯನ್ನು ವಿ.ವಿ ಯು ನೀಡಿರುವುದಿಲ್ಲ.
2022 ಮಾರ್ಚ್ ನಲ್ಲಿ ಮರು ಮೌಲ್ಯ ಮಾಪನಕ್ಕೆ ಶುಲ್ಕಪಾವತಿ ಮಾಡಿದ ವಿದ್ಯಾರ್ಥಿಗಳ ಉತ್ತರ ಪತ್ರಿಕೆಯ ಮೌಲ್ಯಮಾಪನವನ್ನು ವಿ.ವಿ ನಡೆಸಿರುವುದಿಲ್ಲ, ವಿದ್ಯಾರ್ಥಿಗಳು 7 ತಿಂಗಳುಗಳಿಂದ ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ.
ಮಂಗಳೂರು ವಿ.ವಿ ಯಿಂದ ದೂರ ಶಿಕ್ಷಣವನ್ನು ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಫಲಿತಾಂಶವನ್ನು ನೀಡಿರುವುದಿಲ್ಲ, ಹಲವಾರು ವಿದ್ಯಾರ್ಥಿಗಳು ಅಂಕಪಟ್ಟಿ ದೊರೆಯದೆ ವಿ.ವಿ ಗೆ ಅಲೆದಾಡುವಂತಾಗಿದೆ .
ಸ್ನಾತಕೋತ್ತರ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೂ ಅಂಕಪಟ್ಟಿಗಳು ಸರಿಯಾಗಿ ದೊರೆಯುತ್ತಿಲ್ಲ, ಫಲಿತಾಂಶಗಳನ್ನು ವಿಳಂಬವಾಗಿ ನೀಡುತ್ತಿರುವುದು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ.
ಈ ಎಲ್ಲಾ ಫಲಿತಾಂಶ ಮತ್ತು ಅಂಕ ಪಟ್ಟಿಯ ಸಮಸ್ಯೆಯಿಂದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಪಡೆಯಲು , ವಿದ್ಯಾರ್ಥಿ ವೇತನವನ್ನು ಪಡೆಯಲು , ಸರ್ಕಾರಿ ವಸತಿ ನಿಲಯಗಳಿಗೆ ಪ್ರವೇಶವನ್ನು ಪಡೆಯುವುದು ಸೇರಿದಂತೆ ಹಲವು ಸೌಲಭ್ಯಗಳಿಂದ ವಂಚಿತರಾಗುವಂತೆ ಮಾಡಿದೆ, ವಿ.ವಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ವಿಶೇಷ ಪರೀಕ್ಷೆ ನಡೆಸುವ ಬರವಸೆಯನ್ನು ವಿ.ವಿ ನೀಡಿ ವಿದ್ಯಾರ್ಥಿಗಳನ್ನು ವಂಚಿಸಿರುತ್ತದೆ . ಸೆಪ್ಟಂಬರ್ ನಲ್ಲಿ ಈ ಬಾರಿ ನಡೆದಿರುವ ಪರೀಕ್ಷೆಗಳ ಮೌಲ್ಯ ಮಾಪನವನ್ನು ನಡೆಸಿ ಕೂಡಲೇ ಫಲಿತಾಂಶ ನೀಡುವ ಅಗತ್ಯವಿದೆ. ಫಲಿತಾಂಶ ವಿಳಂಬವಾದಲ್ಲಿ ಸ್ನಾತಕೊತ್ತರ ಶಿಕ್ಷಣವನ್ನು ಪಡೆಯುವಲ್ಲಿ ವಿದ್ಯಾರ್ಥಿಗಳು ವಂಚಿತರಾಗಲಿದ್ದಾರೆ .
ಈ ಎಲ್ಲಾ ಸಮಸ್ಯೆಗಳನ್ನು ಸರಿಪಡಿಸುವ ದೃಷ್ಟಿಯಿಂದ ಮಂಗಳೂರು ವಿ.ವಿ ಯು ಈ ಕೂಡಲೇ ಕ್ರಮವನ್ನು ಕೈಗೊಳ್ಳುವಂತೆ ವಿದ್ಯಾರ್ಥಿ ಪರಿಷತ್ ಆಗ್ರಹಿಸಿ ಮಂಗಳೂರಿನ ಕ್ಲಾಕ್ ಟವರ್ ನ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು, ಇದಕ್ಕೆ ವಿವಿಧ ಕಾಲೇಜುಗಳಿಂದ 2000ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು, ಹೋರಾಟದ ನೇತೃತ್ವವನ್ನು ಅಭಾವಿಪ ರಾಜ ಕಾರ್ಯದರ್ಶಿ ಮಣಿಕಂಠ ಕಳಸ ಇವರು ವಹಿಸಿದ್ದರು, ಶ್ರೇಯಸ್ ಶೆಟ್ಟಿ, ನಿಶಾನ್ ಆಳ್ವ ಇವರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.