ರಾಮನಗರ (ವಿಶ್ವ ಕನ್ನಡಿಗ ನ್ಯೂಸ್) : ಜಿಲ್ಲೆಯ ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ(45) ಅವರು ಮೂರು ಪುಟಗಳ ಡೆತ್ ನೋಟ್ ಬರೆದಿಟ್ಟು ಮಠದ ತಮ್ಮ ಕೊಠಡಿಯ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್ ನೋಟ್ನಲ್ಲಿ ಕೆಲವರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ಯಾರ ಸಹಾಯವೂ ಇರಲಿಲ್ಲ. ಕೆಲವರಿಂದ ಬೆದರಿಕೆ ಕರೆಗಳು ಸಹ ಬಂದಿವೆ ಎಂದು ಉಲ್ಲೇಖಿಸಿದ್ದಾರೆ.
ಅನೇಕ ಉತ್ತಮ ಕಾರ್ಯಕ್ರಮಗಳನ್ನು ಮಾಡಿ ಸಮಾಜಕ್ಕೆ ಮಾದರಿ ಮಠವಾಗಿಯೂ ಇದು ಬೆಳೆದಿದೆ. ಆದ್ರೆ ಕೆಲ ದಿನಗಳಿಂದ ಸ್ವಾಮೀಜಿಗಳ ವಿರುದ್ಧ ಕೇಳಿ ಬಂದ ಆರೋಪಕ್ಕೆ ಅಂಜಿ ಸ್ವಾಮೀಜಿ ಪ್ರಾಣ ತ್ಯಾಗ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ವಾಮೀಜಿ ನಿಧನ ಹಿನ್ನೆಲೆ ಹಲವು ಮಠಾಧೀಶರು ಮಠಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಪೋಲಿಸರ ತನಿಖೆ ನಂತರ ಆತ್ಮಹತ್ಯೆಗಿರುವ ಕಾರಣ ಬಯಲಾಗಲಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.