(ವಿಶ್ವ ಕನ್ನಡಿಗ ನ್ಯೂಸ್) : ಯುಎಇ ಅಧ್ಯಕ್ಷ, ಹಿಸ್ ಹೈನೆಸ್ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್, ಭಾರತೀಯ ಬೆಳಕಿನ ಹಬ್ಬವಾದ ದೀಪಾವಳಿಯನ್ನು ಆಚರಿಸುತ್ತಿರುವ ಎಮಿರೇಟ್ಸ್ ಮತ್ತು ಪ್ರಪಂಚದಾದ್ಯಂತ ಎಲ್ಲರಿಗೂ ಶಾಂತಿ, ಸಮೃದ್ಧಿ ಮತ್ತು ಸಂತೋಷವನ್ನು ಹಾರೈಸಿದ್ದಾರೆ.
ಟ್ವಿಟರ್ನಲ್ಲಿ ಶೇಖ್ ಮೊಹಮ್ಮದ್ ತಮ್ಮ ಶುಭಾಶಯಗಳನ್ನು ಅರೇಬಿಕ್, ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಪೋಸ್ಟ್ ಮಾಡಿದ್ದಾರೆ. ಇಂದು ಮುಂಜಾನೆ, ಯುಎಇ ಉಪಾಧ್ಯಕ್ಷ ಮತ್ತು ಪ್ರಧಾನ ಮಂತ್ರಿ ಮತ್ತು ದುಬೈ ಆಡಳಿತಗಾರ ಹಿಸ್ ಹೈನೆಸ್ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರು ಯುಎಇ ಜನರ ಪರವಾಗಿ ದೀಪಾವಳಿಯನ್ನು ಆಚರಿಸುವ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.