ಜಮ್ಮು-ಕಾಶ್ಮೀರ (ವಿಶ್ವ ಕನ್ನಡಿಗ ನ್ಯೂಸ್) : ಮುಂಬರುವ ದಿನಗಳಲ್ಲಿ ಕಾಶ್ಮೀರ ಶೇ.100ರಷ್ಟು ಹಿಂದೂ ಮುಕ್ತವಾಗಲಿದೆ ಎಂದು ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ. ಕಾಶ್ಮೀರಿ ಪಂಡಿತರ ಮೇಲೆ ಹೆಚ್ಚುತ್ತಿರುವ ಉದ್ದೇಶಿತ ಹತ್ಯೆಗಳಿಗೆ ಪ್ರತಿಕ್ರಿಯೆಯಾಗಿ ಅವರು ಮಾತನಾಡುತ್ತಿದ್ದರು.
ಸರಕಾರ ಈ ವಿಚಾರದಲ್ಲಿ ಕ್ರಮ ಕೈಗೊಳ್ಳಲು ವಿಫಲವಾಗುತ್ತಿದ್ದು, ಕೂಡಲೇ ಏನೂ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಕಾಶ್ಮೀರ ಶೇ.100ರಷ್ಟು ಹಿಂದೂ ಮುಕ್ತವಾಗಲಿದೆ ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ. ಕಾಶ್ಮೀರಿ ಪಂಡಿತರು ಮತ್ತೆ 1990ರ ಸ್ಥಿತಿಯನ್ನೇ ಅನುಭವಿಸುತ್ತಿದ್ದಾರೆ. ಹತ್ಯೆಗಳಿಗೆ ನಾನು ಜವಾಬ್ದಾರನಲ್ಲ ಮತ್ತು ನಾನು ಭಯೋತ್ಪಾದನೆಯ ಪರವಾಗಿ ಯಾವುದೇ ಹೇಳಿಕೆ ನೀಡಿಲ್ಲ ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಘಟನೆಯಲ್ಲಿ ಮಧ್ಯಪ್ರವೇಶಿಸಿ ಕೂಡಲೇ ಈ ಬಗ್ಗೆ ಗಮನಹರಿಸಬೇಕು ಎಂದು ಫಾರೂಕ್ ಅಬ್ದುಲ್ಲಾ ಆಗ್ರಹಿಸಿದ್ದಾರೆ. ಕಾಶ್ಮೀರಿ ಪಂಡಿತರ ಉದ್ದೇಶಿತ ಹತ್ಯೆಗಳು ಮತ್ತು ಅಲ್ಪಸಂಖ್ಯಾತ ಹಿಂದೂಗಳ ವಲಸೆಯ ಕುರಿತು ಸರ್ವಪಕ್ಷ ಸಭೆಯನ್ನು ಕರೆಯಬೇಕು ಎಂದು ಅವರು ಹೇಳಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.